ದೇಶದಲ್ಲಿ ಪ್ರಜೆಗಳೇ ಪ್ರಭುಗಳು

7

ದೇಶದಲ್ಲಿ ಪ್ರಜೆಗಳೇ ಪ್ರಭುಗಳು

Published:
Updated:

ಗೋಣಿಕೊಪ್ಪಲು: ‘ಪ್ರಜಾತಂತ್ರ ವ್ಯವಸ್ಥೆಯ ಗುಣಮಟ್ಟವನ್ನು ಕಾಪಾಡಿ ಕೊಳ್ಳಬೇಕು’ ಎಂದು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹೇಳಿದರು.

ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಮತ್ತು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವವದಲ್ಲಿ ಪ್ರಜೆಗಳೇ ಪ್ರಭುಗಳು. ಮಕ್ಕಳು ದೇಶಪ್ರೇಮ ಬೆಳೆಸಿ ಕೊಳ್ಳಬೇಕು. ಎಲ್ಲರೂ ಒಂದಾಗಿದ್ದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ವೈದ್ಯ ಡಾ.ಮಾಪಂಗಡ ಬೆಳ್ಳಿಯಪ್ಪ ಮಾತನಾಡಿ, ವಿದ್ಯೆಯನ್ನು ಯಾರೂ ದೋಚಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ತಮ್ಮಲ್ಲಿ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆಮಾಡಿಕೊಂಡು ಮುಂದುವರಿಯಬೇಕು. ಶ್ರಮಪಟ್ಟರೆ ಉತ್ತಮ ಫಲವಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್.ಪೃಥ್ಯು ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ ಮಾತನಾಡಿದರು.

ಉಪಾಧ್ಯಕ್ಷ ಕಾಯಮಾಡ ರಾಜ, ಕೋಶಾಧಿಕಾರಿ ಎ.ಬಿ.ದೇವಯ್ಯ, ಸಹಕಾರ್ಯದರ್ಶಿ ಪೋಡಮಾಡ ಮೋಹನ್, ಸಹಕೋಶಾಧಿಕಾರಿ ಆಲೆಮಾಡ ಕರುಂಬಯ್ಯ, ನಿರ್ದೇಶಕ ರಾದ ಅಳಮೇಂಗಡ ಸುರೇಶ್ ಸುಬ್ಬಯ್ಯ, ಮೇಚಂಡ ಪೆಮ್ಮಯ್ಯ, ಮಾಚಂಗಡ ಸುಜಾ ಪೂಣಚ್ಚ, ಕಾಟಿಮಾಡ ಶರೀನ್ ಮುತ್ತಣ್ಣ, ಪ್ರಾಂಶುಪಾಲರಾದ ಕೆ.ಪಿ.ಪೊನ್ನಮ್ಮ, ಮುಖ್ಯಶಿಕ್ಷಕ ಕೆ.ಚಂದ್ರಶೇಖರ್ ಇದ್ದರು.

ಡಾ.ಬೆಳ್ಳಿಯಪ್ಪ, ಬಾನಂಡ ಪೃಥ್ಯು ಅವರನ್ನು ಸನ್ಮಾನಿಸಲಾಯಿತು. ಆರಂಭದಲ್ಲಿ ವಿದ್ಯಾರ್ಥಿಗಳು ಊರಿನ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನಸೆಳೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry