ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ

Last Updated 27 ಜನವರಿ 2018, 9:27 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಸಂವಿಧಾನದ ಆಶಯಗಳಿಗೆ ಭಂಗ ತರದಂತೆ ನಡೆದುಕೊಳ್ಳುವ ಹೊಣೆ ಪ್ರತಿಯೊಬ್ಬ ಪ್ರಜೆಗೂ ಇದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್.ಮಹೇಶ್‌ಬಾಬು ಹೇಳಿದರು.

ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನವನ್ನು ಗೌರವಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶದ ಉಜ್ವಲ ಭವಿಷ್ಯಕ್ಕೆ ಯುವ ಜನತೆ ಸಬಲರಾಗುವ ಜೊತೆಗೆ ಸಂವಿಧಾನ ದತ್ತ ಆಶಗಳನ್ನು ಪಾಲಿಸುವ ಹೊಣೆಗಾರಿಕೆಯನ್ನು ಅರಿಯಬೇಕು ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೇಶದ ಪ್ರಗತಿ ಹಾಗೂ ಶಾಂತಿಯುತ ಬದುಕಿಗೆ ಸಂವಿಧಾನದ ಮಹತ್ವದ ದಾರಿ ಮಾಡಿಕೊಟ್ಟಿದೆ. ಜಗತ್ತಿನಲ್ಲಿಯೇ ವಿಶಿಷ್ಟ ಸಂವಿಧಾನ ಎನಿಸಿಕೊಂಡಿದೆ. ಹಲವು ವೈವಿಧ್ಯತೆಗಳ ಹಾಗೂ ಸವಾಲುಗಳ ನಡುವೆಯೂ ಭಾರತ ಪ್ರಗತಿಯಾಗುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕಾಗಿದೆ. ದೇಶದಲ್ಲಿನ ಶೇ60 ರಷ್ಟು ಯುವಕರ ಮೇಲೆ ದೇಶದ ಜವಾಬ್ದಾರಿ ಹೆಚ್ಚಿದೆ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ನಗರಸಭೆ ಅಧ್ಯಕ್ಷ ತ.ನ.ಪ್ರಭುದೇವ, ಉಪಾಧ್ಯಕ್ಷೆ ಜಯಲಕ್ಷ್ಮಿನಟರಾಜ್, ತಹಶೀಲ್ದಾರ್ ಬಿ.ಎ.ಮೋಹನ್, ಡಿವೈಎಎಸ್‌ಪಿ ವೈ.ನಾಗರಾಜ್, ನಗರ ಸಭೆ ಪೌರಾಯುಕ್ತ ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣ ಅಧಿಕಾರಿ ಆರ್‌.ರಂಗಪ್ಪ, ತಾಲ್ಲೂಕು ಪಂಚಾಯಿತಿ ಇಒ ಕೃಷ್ಣಪ್ಪಲೋಹರ್, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸದಸ್ಯರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸಿದರು.

ವಿವಿಧಡೆ ಗಣರಾಜ್ಯೋತ್ಸವ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಧ್ವಜಾರೋಹಣ ಮಾಡಿದರು. ಪರಿಷತ್‌ ಅಧ್ಯಕ್ಷೆ ಪ್ರಮೀಳಾ ಮಹಾದೇವ್‌, ಕಾರ್ಯದರ್ಶಿ ವಿ.ಸಿ.ಜ್ಯೋತಿಕುಮಾರ್‌, ಕಸಬಾ ಹೋಬಳಿ ಅಧ್ಯಕ್ಷ ರಾಜುಸಣ್ಣಕ್ಕಿ, ಗಂಗರಾಜಶಿರಾವಾರ , ಸ್ತ್ರೀ ಶಕ್ತಿ ಗುಂಪುಗಳ ಸಂಪನ್ಮೂಲ ವ್ಯಕ್ತಿ ಎನ್.ಸಿ.ಲಕ್ಷ್ಮಿ, ಲೀಲಾಮಹೇಶ್, ಎನ್.ಮಹಾದೇವ್ ಇದ್ದರು.

ನಗರಸಭೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ನಗರಸಭೆ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ಉಪಾದ್ಯಕ್ಷೆ ಜಯಲಕ್ಷ್ಮಿ ನಟರಾಜ್‌, ಪೌರಾಯುಕ್ತ ಮಂಜುನಾಥ್‌ ಇದ್ದರು. ನಗರದ ಎಂ.ಎಸ್.ವಿ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಶಾಲೆ ಅಧ್ಯಕ್ಷ ಎ.ಸುಬ್ರಮಣಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಮಂಜುಳಾ, ಉಪಾಧ್ಯಕ್ಷ ಸ್ವರೂಪ್‌, ನಿರ್ವಾಹಕಿ ನಯನಾಸ್ವರೂಪ್, ಪ್ರಾಂಶು

ಪಾಲ ವಿಜಯಭಾಸ್ಕರ ರೆಡ್ಡ ಇದ್ದರು. ತಾಲ್ಲೂಕಿನ ನಾಗದೇನಹಳ್ಳಿಯ ಗೀತಂ ಸ್ಕೂಲ್ ಆಫ್ ಟೆಕ್ನಾಲಜಿ ಕ್ಯಾಂಪ್‌ಸ್‌ನಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗೀತಂ ಕ್ಯಾಂಪಸ್‌ನ ಸಹಾಯಕ ಕುಲಪತಿ ಪ್ರೋ. ಪಿ.ವಿ.ಸಿವಪುಲ್ಲಯ್ಯ ಧ್ವಜಾರೋಹಣ ಮಾಡಿದರು. ಗೀತಂ ಸ್ಕೂಲ್ ಆಫ್ ಟೆಕ್ನಾಲಜಿಯ ನಿರ್ದೇಶಕ ಪ್ರೋ.ಕೆ.ವಿಜಯಭಾಸ್ಕರ ರಾಜು, ನಿರ್ದೇಶಕ ಡಿ.ವಂಶಿ ಇದ್ದರು.

ನಗರದ ಸರ್ಕಾರಿ ಪ್ರಥಮ ದರ್ಜೆಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ ಧ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT