‘ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಇರಲಿ’

7

‘ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಇರಲಿ’

Published:
Updated:

ಖಾನಾಪುರ: ಪ್ರತಿಯೊಬ್ಬ ಭಾರತೀಯರೂ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಾನಂದ ಉಳ್ಳೇಗಡ್ಡಿ ಹೇಳಿದರು. ಇಲ್ಲಿನ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ‘ಸಮಾಜದ ಬಹುದೊಡ್ಡ ಆಸ್ತಿಯಾಗಿರುವ ಯುವಜನರು ರಾಷ್ಟ್ರ ಭಕ್ತಿ, ರಾಷ್ಟ್ರದ ಬಗ್ಗೆ ಗೌರವ ಹಾಗೂ ಅಭಿಮಾನ ಹೊಂದಬೇಕು’ ಎಂದರು.

ಶಾಸಕ ಅರವಿಂದ ಪಾಟೀಲ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪೊಲೀಸ್ ಸಿಬ್ಬಂದಿ, ಎನ್.ಸಿ.ಸಿ ವಿದ್ಯಾರ್ಥಿಗಳು ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಉತ್ತಮ ಸೇವೆ ಸಲ್ಲಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸತ್ಕರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry