ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಕಾರಿ ಮಾರುಕಟ್ಟೆ ಉದ್ಘಾಟನೆ ಇಂದು

Last Updated 27 ಜನವರಿ 2018, 9:29 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಪ್ರಾಂಗಣದಲ್ಲಿ ಹೊಸದಾಗಿ ನಿರ್ಮಿಸಿರುವ ತರಕಾರಿ ಮಾರುಕಟ್ಟೆ ಪ್ರಾಂಗಣದ ಉದ್ಘಾಟನೆ ಜ. 27ರಂದು ಬೆಳಿಗ್ಗೆ 11.30ಕ್ಕೆ ನೆರವೇರಲಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾದ ಜಾಧವ ನಿಂಗಪ್ಪ ವಿಠ್ಠಲ ಅವರು ತಿಳಿಸಿದರು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರು.

1968ರಲ್ಲಿ ಬೆಳಗಾವಿ ನಗರ ಪ್ರದೇಶದಿಂದ ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಗೊಂಡಿತ್ತು. ಸ್ಥಳಾಂತರಗೊಂಡು ಈಗ 50 ವರ್ಷಗಳಾಗಿದ್ದು, ಈ ವರ್ಷ ಮಾರುಕಟ್ಟೆ ಸಮಿತಿಯ ಸುವರ್ಣ ಮಹೋತ್ಸವ ವರ್ಷವನ್ನಾಗಿ ಆಚರಿಸಲಾಗುವುದು ಎಂದು ಹೇಳಿದರು. ಸಚಿವ ರಮೇಶ ಜಾರಕಿಹೊಳಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ್‌ ಅಧ್ಯಕ್ಷತೆ ವಹಿಸುವರು.

ಕೃಷಿ ಮಾರುಕಟ್ಟೆ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕೇಂದ್ರದ ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಅವರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪಾಧ್ಯಕ್ಷ ರೇಣುಕಾ ಪಾಟೀಲ, ಸದಸ್ಯರಾದ ಆನಂದ ಪಾಟೀಲ, ಮಹೇಶ ಕುಗಜಿ, ಮನೋಜ ಮತ್ತಿಕೊಪ್ಪ, ನಾರಾಯಣ ಕೋಲೆ, ಸಾವಿತ್ರಿ ಪಾಟೀಲ ಹಾಗೂ ಇತರರು ಹಾಜರಿದ್ದರು.

13 ಎಕರೆಯಲ್ಲಿ ಮಾರುಕಟ್ಟೆ

ಎಪಿಎಂಸಿ ಆವರಣದ 13 ಎಕರೆ ಪ್ರದೇಶದಲ್ಲಿ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಎ, ಬಿ ಮತ್ತು ಸಿ ಬ್ಲಾಕ್‌ಗಳಲ್ಲಿ ಒಟ್ಟು 132 ಮಳಿಗೆ ನಿರ್ಮಾಣ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ 50ರಿಂದ 100 ಅಡಿ ವಿಶಾಲ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT