ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ವಿಧಾನಸಭೆಯಲ್ಲಿ ಟಿಪ್ಪು ಸುಲ್ತಾನ್‌ ಭಾವಚಿತ್ರ : ಬಿಜೆಪಿ ವಿರೋಧ

Last Updated 27 ಜನವರಿ 2018, 10:56 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಅಳವಡಿಸಿರುವ 70 ಸಾಧಕರ ಭಾವಚಿತ್ರಗಳಲ್ಲಿ ಟಿಪ್ಪು ಸುಲ್ತಾನ್‌ ಚಿತ್ರ ಇರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಶುಕ್ರವಾರ ಭಾವಚಿತ್ರಗಳನ್ನು ಅನಾವರಣಗೊಳಿಸಿದ್ದರು. ಆ ಸಾಧಕರಲ್ಲಿ ಟಿಪ್ಪು ಸುಲ್ತಾನ್‌, ಕಿತ್ತೂರು ರಾಣಿ ಚನ್ನಮ್ಮ, ಅಶ್ಫಾಕುಲ್ಲಾ ಖಾನ್‌, ಭಗತ್‌ ಸಿಂಗ್‌, ಬಿರ್ಸಾ ಮುಂಡಾ, ಸುಭಾಷ್‌ ಚಂದ್ರ ಬೋಸ್‌ ಅವರು ಇದ್ದಾರೆ.

ಟಿಪ್ಪು ಭಾವಚಿತ್ರ ಅಳವಡಿಕೆಗೆ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ‘ವಿವಾದಾತ್ಮಕ ವ್ಯಕ್ತಿಗಳ ಚಿತ್ರಗಳನ್ನು ವಿಧಾನಸಭೆಯಲ್ಲಿ ಹಾಕಬಾರದು’ ಎಂದು ಬಿಜೆಪಿ ಶಾಸಕ ಓಂ ಪ್ರಕಾಶ್‌ ಶರ್ಮಾ ಅವರು ಕಲಾಪದಲ್ಲಿ ಹೇಳಿದರು.

ಇದಕ್ಕೆ ಸಭಾಪತಿ ರಾಮ್‌ ನಿವಾಸ್‌ ಗೋಯಲ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ‘ಎಲ್ಲ ವಿಷಯಗಳನ್ನೂ ವಿವಾದ ಮಾಡಲಾಗುತ್ತಿದೆ. ಭಾರತದ ಸಂವಿಧಾನದ 144ನೇ ಪುಟದಲ್ಲಿ ಟಿಪ್ಪು ಸುಲ್ತಾನನ ಚಿತ್ರವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಮತ್ತು ಸಂವಿಧಾನ ರಚಿಸಿದವರನ್ನು ದೇಶದ್ರೋಹಿಗಳು ಎಂದು ಪರಿಗಣಿಸಬೇಕೆ ಅಥವಾ ಬಿಜೆಪಿಯವರನ್ನು ದೇಶದ್ರೋಹಿಗಳು ಎನ್ನಬೇಕೆ’ ಎಂದರು.

‘ಬಿಜೆಪಿ ಇಂತಹ ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆ ಗಮನ ಹರಿಸಬೇಕು’ ಎಂದರು.

ಅರವಿಂದ್‌ ಕೇಜ್ರಿವಾಲ್‌ ಗಣರಾಜ್ಯೋತ್ಸವ ಭಾಷಣದಲ್ಲಿ , ‘ಬಹಳ ಕಷ್ಟಗಳ ತರುವಾಯ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಇಂದಿನ ಪರಿಸ್ಥಿತಿಯಲ್ಲಿ ಅದನ್ನು ಉಳಿಸಿಕೊಳ್ಳಲು ನಾವು ಇನ್ನಷ್ಟು ಕಷ್ಟಪಡಬೇಕಿದೆ. ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹಿಂಸೆಯಿಂದಾಗಿ ಜನರು ನಿಶ್ಚಿಂತೆಯಿಂದ ಜೀವನ ನಡೆಸುವುದು ದುಸ್ತರವಾಗಿದೆ’ ಎಂದು ಹೇಳಿದ್ದರು.

‘ಇಂದು ವಿಭಜಕ ಶಕ್ತಿಗಳು ದೇಶವಿರೋಧಿ ಚಟುವಟಿಕೆ ನಡೆಸುತ್ತಿವೆ. ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಎಲ್ಲ ಸರ್ಕಾರಗಳ ಆದ್ಯತೆ ಆಗಬೇಕು’ ಎಂದು ಆಶಿಸಿದ್ದರು.

ವಿಧಾನಸಭೆಯಲ್ಲಿ ಅಳವಡಿಸಿರುವ ಭಾವಚಿತ್ರಗಳು ಎರಡುವರೆ ಅಡಿ ಎತ್ತರ ಮತ್ತು ಒಂದುವರೆ ಅಡಿ ಅಗಲವಿವೆ. ಅವುಗಳಲ್ಲಿ ಸಾಧಕರು ದೇಶಕ್ಕೆ ನೀಡಿದ ಕೊಡುಗೆಯ ಸಂಕ್ಷಿಪ್ತ ವಿವರವೂ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT