31ರಂದು ರೈತ ಸಮಾವೇಶ

7

31ರಂದು ರೈತ ಸಮಾವೇಶ

Published:
Updated:
31ರಂದು ರೈತ ಸಮಾವೇಶ

ಬೆಂಗಳೂರು: ‘ರೈತ ಸಾಲಗಾರನಲ್ಲ. ಸರ್ಕಾರವೇ ಬಾಕಿದಾರ’ ಎಂಬ ಘೋಷವಾಕ್ಯದಡಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರೈತರ ಸಮಾವೇಶವನ್ನು ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ 31 ರಂದು ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಸ್ವಾತಂತ್ರ್ಯ ಬಂದ ಬಳಿಕ ದೇಶದಲ್ಲಿ ಅಧಿಕಾರ ನಡೆಸಿದ ಎಲ್ಲ ಪಕ್ಷಗಳು ರೈತರನ್ನು ಕಡೆಗಣಿಸಿವೆ. ಹೀಗಾಗಿ, ಸಂಕಷ್ಟದಲ್ಲಿರುವ ಅವರ ಕೈಹಿಡಿಯಬೇಕಾದ ಅನಿವಾರ್ಯತೆ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಸಮಾವೇಶ ಆಯೋಜಿಸಲಾಗಿದೆ’ ಎಂದರು.

ರಾಜ್ಯದ ಸಹಕಾರಿ ಬ್ಯಾಂಕ್‍ಗಳಲ್ಲಿ ರೈತರು ಮಾಡಿದ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾಕ್ಕೆ ಕೇಂದ್ರ ಸರ್ಕಾರ ಒಪ್ಪದಿದ್ದರೆ ರಾಜ್ಯ ಸರ್ಕಾರವೇ ಆ ಜವಾಬ್ದಾರಿ ಹೊತ್ತು ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry