‘6 ತಿಂಗಳಲ್ಲಿ ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸಿ’

7

‘6 ತಿಂಗಳಲ್ಲಿ ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸಿ’

Published:
Updated:
‘6 ತಿಂಗಳಲ್ಲಿ ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸಿ’

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣ ಸಂಬಂಧ ಬಿಡಿಎ ಮತ್ತು ಜಲಮಂಡಳಿಗೆ ನೋಟಿಸ್‌ ನೀಡಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಆರು ತಿಂಗಳಲ್ಲಿ ಕೆರೆ ಸ್ವಚ್ಛಗೊಳಿಸುವಂತೆ ನಿರ್ದೇಶಿಸಿದೆ.

‘ಆರು ತಿಂಗಳಿನಲ್ಲಿ ಜಲಮೂಲದ ಕಳೆಯನ್ನು ಸಂಪೂರ್ಣ ತೆರವು ಮಾಡಿರಬೇಕು. ಅದರ ಸುತ್ತಲೂ ಬೇಲಿ ನಿರ್ಮಿಸಬೇಕು ಹಾಗೂ ಆಮ್ಲಜನಕ ಕೊರತೆಯಾಗದಂತೆ ಏರೇಟರ್‌ ಅಳವಡಿಸಬೇಕು ಎಂದು ಬಿಡಿಎಗೆ ಸೂಚನೆ ನೀಡಿದ್ದೇವೆ’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್‌ ತಿಳಿಸಿದರು.

‘ಕೆರೆಯ ಜಲಾನಯನ ಪ್ರದೇಶದಲ್ಲಿರುವ ಎಲ್ಲಾ ಕೊಳಚೆ ನೀರು ಸಂಸ್ಕರಣಾ ಘಟಕಗಳ (ಎಸ್‌ಟಿಪಿ) ಕಾರ್ಯಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಜಲಮಂಡಳಿ ಅಧಿಕಾರಿಗಳಿಗೆ ಹೇಳಿದ್ದೇವೆ. ನಮ್ಮ ಅಧಿಕಾರಿಗಳೂ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಮಾಹಿತಿ ನೀಡಿದರು.

‘ಇದೇ 29ಕ್ಕೆ ಹಸಿರು ನ್ಯಾಯಮಂಡಳಿಯಲ್ಲಿ (ಎನ್‌ಜಿಟಿ) ವಿಚಾರಣೆ ಇದೆ. ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುತ್ತೇವೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry