‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸಿ: ಗ್ರಾಮ ಸಹಾಯಕರ ಒತ್ತಾಯ

7

‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸಿ: ಗ್ರಾಮ ಸಹಾಯಕರ ಒತ್ತಾಯ

Published:
Updated:

ಬೆಂಗಳೂರು: ಕಂದಾಯ ಇಲಾಖೆ ಗ್ರಾಮ ಸಹಾಯಕರನ್ನು ಗ್ರೂಪ್ ‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ನಗರದ ಸ್ವಾತಂತ್ರ ಉದ್ಯಾನದಲ್ಲಿ ಫೆ.8ರಿಂದ ಧರಣಿ ನಡೆಸಲು ರಾಜ್ಯ ಸರ್ಕಾರಿ ಕಂದಾಯ ಇಲಾಖಾ ಗ್ರಾಮ ಸಹಾಯಕರ ಸಂಘ ತೀರ್ಮಾನಿಸಿದೆ.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮುದ್ದುಕೃಷ್ಣ, ‘10 ಸಾವಿರಕ್ಕೂ ಅಧಿಕ ಗ್ರಾಮ ಸಹಾಯಕರು ರಾಜ್ಯದಲ್ಲಿದ್ದಾರೆ. ₹ 10 ಸಾವಿರ ಗೌರವಧನ ಹೊರತು ಪಡಿಸಿದರೆ ಸರ್ಕಾರ ಯಾವುದೇ ಸೌಲಭ್ಯ ಕಲ್ಪಿಸಿಲ್ಲ’ ಎಂದರು.

ಗ್ರಾಮಾಂತರ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಆರೋಗ್ಯ ಭದ್ರತೆಯನ್ನೂ ಕಲ್ಪಿಸಿಲ್ಲ. ಕಡಿಮೆ ಗೌರವಧನದಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಚುನಾವಣೆಗಳ ವೇಳೆ ಹೆಚ್ಚಿನ ಕೆಲಸ ಮಾಡಿಸುತ್ತಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry