₹1.5 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

7

₹1.5 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ

Published:
Updated:

ಬೆಂಗಳೂರು: ಹೇರೋಹಳ್ಳಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಆಸ್ಪತ್ರೆ ಕಟ್ಟಡ ಹಾಗೂ ಕೆಂಪೇಗೌಡನಗರದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೇಲ್ಸೆತುವೆಯನ್ನು ಶಾಸಕ ಎಸ್.ಟಿ. ಸೋಮಶೇಖರ್‌ ಉದ್ಘಾಟಿಸಿದರು.

ಇದೇ ವೇಳೆ ನಾಗರಹೊಳೆ ನಗರ, ಮುನೇಶ್ವರ ನಗರದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಲಾಯಿತು.

‘ಹೇರೋಹಳ್ಳಿ ವಾರ್ಡ್‌ನ ಎಲ್ಲಾ ರಸ್ತೆಯಲ್ಲಿ ಒಳಚರಂಡಿ ಮಾಡಲಾಗಿದೆ. 20 ಶುದ್ಧ ಕುಡಿಯುವ ನೀರಿನ ಘಟಕ, ಮನೆ ಮನೆಗೆ ಕಾವೇರಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಹೇಳಿದರು.

ಬಿಬಿಎಂಪಿ ಸದಸ್ಯ ರಾಜಣ್ಣ, ‘ಮೂರು ವರ್ಷಗಳ ಹಿಂದೆ ಹೇರೋಹಳ್ಳಿ ವಾರ್ಡ್‌ನಲ್ಲಿ ಕುಡಿಯುವ ನೀರಿಗಾಗಿ ತತ್ವರ ಇತ್ತು. ಆಗ ವಾರಕ್ಕೊಮ್ಮೆ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಕೆಲವರು 1 ಟ್ಯಾಂಕ್‌ಗೆ ₹400 ನೀಡುತ್ತಿದ್ದರು. ಈಗಿನ ನೀರಿನ ಸಮಸ್ಯೆ, ಒಳಚರಂಡಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಸಲಾಗಿದೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry