ಕಾಸ್‌ಗಂಜ್‌ ಹಿಂಸಾಚಾರ: ಇಂಟರ್‌ನೆಟ್‌ ಸೇವೆ ಸ್ಥಗಿತ, ನಿಷೇಧಾಜ್ಞೆ ಜಾರಿ

7

ಕಾಸ್‌ಗಂಜ್‌ ಹಿಂಸಾಚಾರ: ಇಂಟರ್‌ನೆಟ್‌ ಸೇವೆ ಸ್ಥಗಿತ, ನಿಷೇಧಾಜ್ಞೆ ಜಾರಿ

Published:
Updated:
ಕಾಸ್‌ಗಂಜ್‌ ಹಿಂಸಾಚಾರ: ಇಂಟರ್‌ನೆಟ್‌ ಸೇವೆ ಸ್ಥಗಿತ, ನಿಷೇಧಾಜ್ಞೆ ಜಾರಿ

ಕಾಸ್‌ಗಂಜ್‌: ಉತ್ತರ ಪ್ರದೇಶದಲ್ಲಿ ಶುಕ್ರವಾರ ಎರಡು ಕೋಮಿನ ಗುಂಪುಗಳ ನಡುವೆ ನಡೆದಿದ್ದ ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು. ಶನಿವಾರ ನಡೆದ ಹಿಂಸಾಚಾರದಲ್ಲಿ ಅಂಗಡಿ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಹಾನಿಯಾಗಿತ್ತು. ಭಾನುವಾರ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ.

ಇಲ್ಲಿ ಐಪಿಸಿ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ ಹಾಗೂ ಭಾನುವಾರ ರಾತ್ರಿ 10ರ ವರೆಗೂ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಆರ್‌ಪಿ ಸಿಂಗ್‌ ಆದೇಶಿಸಿದ್ದಾರೆ.

ಗಣರಾಜ್ಯೋತ್ಸವ ದಿನದಂದು ಕಾಸ್‌ಗಂಜ್‌ನಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ)ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ 16 ವರ್ಷ ವಯಸ್ಸಿನ ಚಂದನ್‌ಗುಪ್ತಾ ಮೃತಪಟ್ಟಿದ್ದರು ಹಾಗೂ ಗಲಭೆಯಲ್ಲಿ ಇಬ್ಬರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ಮಥುರಾ–ಬರೇಲಿ ಹೆದ್ದಾರಿಯಲ್ಲಿ ಆಯೋಜಿಸಲಾಗಿದ್ದ ಬೈಕ್‌ ರ‍್ಯಾಲಿಯಲ್ಲಿ ಎರಡು ಕೋಮಿನ ಗುಂಪುಗಳ ನಡುವೆ ಜಟಾಪಟಿ ಸೃಷ್ಟಿಯಾಗಿ ಉಭಯ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿತ್ತು.

ಹತ್ಯೆ ಹಾಗೂ ಗಲಭೆಗೆ ಪ್ರಚೋದನೆ, ಬಸ್‌ ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಕಾನೂನು–ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿರುವ ಕಾರಣ ಶನಿವಾರ ಉತ್ತರ ಪ್ರದೇಶ ಪೊಲೀಸರು 49 ಜನರನ್ನು ಬಂಧಿಸಿದ್ದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry