ಜಿಲ್ಲೆಯಲ್ಲಿ 670 ಪೋಲಿಯೊ ಲಸಿಕಾ ಕೇಂದ್ರ

7

ಜಿಲ್ಲೆಯಲ್ಲಿ 670 ಪೋಲಿಯೊ ಲಸಿಕಾ ಕೇಂದ್ರ

Published:
Updated:

ಉಡುಪಿ: ಉಡುಪಿ, ಕುಂದಾಪುರ, ಕಾರ್ಕಳ ತಾಲ್ಲೂಕು ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿ 581 ಹಾಗೂ ನಗರ ಪ್ರದೇಶದಲ್ಲಿ 89 ಪಲ್ಸ್‌ ಪೋಲಿಯೋ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಶನಿವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಜಿಲ್ಲೆಯಾದ್ಯಂತ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದ ಒಳಗಿನ 82,872 ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಮೂರು ತಾಲ್ಲೂಕುಗಳಲ್ಲಿ 9,695 ಮಂದಿ ಸ್ವಯಂಸೇವಕರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಒಟ್ಟು 30 ಟ್ರಾನ್ಸಿಸ್ಟ್ ಬೂತ್‌ಗಳು, 11 ಮೊಬೈಲ್ ಟೀಂಗಳನ್ನು ನಿಯೋಜಿಸಲಾಗಿದೆ’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಮಾತನಾಡಿ, ’ಪಾಕಿಸ್ತಾನ, ಅಫ್ಘಾನಿಸ್ತಾನ, ನೈಜೀರಿಯಾದಲ್ಲಿ ಪೊಲಿಯೋ ಪ್ರಕರಣ ಕಂಡುಬಂದಿದ್ದು, ಪಕ್ಕದ ದೇಶಕ್ಕೆ ಹರಡುವ ಸಾಧ್ಯತೆ ಇರುವುದರಿಂದ ಸಾರ್ವತ್ರಿಕ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಇಲಾಖೆ ಜತೆಗೆ ಅನೇಕ ಸಂಘ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು ಸಹಯೋಗ ನೀಡುತ್ತಿವೆ. ಬೆಿಗ್ಗೆ 8 ರಿಂದ 5ರವರೆಗೆ ಉಡುಪಿ ಸರ್ವಿಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್, ವಲಸಿಗರ ಕೇಂದ್ರ, ಖಾಸಗಿ ಆಸ್ಪತ್ರೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರ ತೆರೆಯಲಾಗುತ್ತದೆ ಎಂದರು. ಆರ್ ಸಿ ಹೆಚ್ ಡಾ. ರಾಮ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry