‘ಹೆಲ್ಮೆಟ್ ಧರಿಸುವುದು ಕಡ್ಡಾಯ’

7

‘ಹೆಲ್ಮೆಟ್ ಧರಿಸುವುದು ಕಡ್ಡಾಯ’

Published:
Updated:

ಗೋಕಾಕ: ದ್ವಿಚಕ್ರ ವಾಹನಗಳ ಮೇಲೆ ಸಂಚರಿಸುವಾಗ ಜೀವವನ್ನು ರಕ್ಷಿಸಿಕೊಳ್ಳಲು ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು 1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಸಿ.ಕೆ.ವೀರೇಶಕುಮಾರ ಹೇಳಿದರು.

ಶನಿವಾರ ಇಲ್ಲಿಯ ಫಾಲ್ಸ್ ರಸ್ತೆಯ ಪೊಲೀಸ್ ಸಂಕೀರ್ಣದಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಪೊಲೀಸ್ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ‘ಸ್ವ–ರಕ್ಷಣೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯ’ ಎಂಬ ವಿಷಯ ಕುರಿತು ಆಯೋಜಿಸಿದ್ದ ಕಾನೂನು ಸಾಕ್ಷರತಾ ಶಿಬಿರದಲ್ಲಿ ಅವರು ಮಾತನಾಡಿದರು.

ಮನುಷ್ಯಮ ಜೀವಕ್ಕೆ ಬೆಲೆ ಕಟ್ಟಲಾಗದು. ಈ ನಿಟ್ಟಿನಲ್ಲಿ ಹೆಲ್ಮೆಟ್ ಕಡ್ಡಾಯ ಕಾನೂನು ಜಾರಿಗೊಳಿಸಿದ್ದು, ಈ ನಿಯಮವನ್ನು ನಾವೆಲ್ಲ ಅರಿತು ಐ.ಎಸ್.ಐ ಮಾರ್ಕಿನ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಸವಾರಿ ಮಾಡಬೇಕು ಎಂದು ಹೇಳಿದರು.

ಹಿರಿಯ ವಕೀಲ ಆರ್.ಎಂ.ಬಳ್ಳಾರಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್.ವಿ.ದೇಮಶೆಟ್ಟಿ ಮಾತನಾಡಿದರು. ಗ್ರಾಮೀಣ ಠಾಣೆಯ ಎಸ್.ಐ ಗಣಪತಿ ಕೋಗನೋಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಹರ ಠಾಣೆಯ ಎಸ್.ಐ ಆರ್.ಎಸ್.ಜಾನಾರ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry