ಬನವಾಸಿ: ’ಕದಂಬೋತ್ಸವ 2018’ ಆಮಂತ್ರಣ ಪತ್ರಿಕೆ ಬಿಡುಗಡೆ

7

ಬನವಾಸಿ: ’ಕದಂಬೋತ್ಸವ 2018’ ಆಮಂತ್ರಣ ಪತ್ರಿಕೆ ಬಿಡುಗಡೆ

Published:
Updated:
ಬನವಾಸಿ: ’ಕದಂಬೋತ್ಸವ 2018’ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರಸಿ: ಫೆ.2 ಮತ್ತು 3ರಂದು ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಶಿವರಾಮ ಹೆಬ್ಬಾರ ಬಿಡುಗಡೆಗೊಳಿಸಿದರು.

ಫೆ.2ರ ಸಂಜೆ 7 ಗಂಟೆಗೆ ಬೃಹತ್ ಮತ್ತು ಮಧ್ಯಮ ಉದ್ದಿಮೆ ಸಚಿವ ಆರ್.ವಿ. ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಸಾಹಿತಿ ನಿಸಾರ್‌ ಅಹಮದ್ ಅವರಿಗೆ ಇದೇ ವೇದಿಕೆಯಲ್ಲಿ ಪಂಪ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮೊದಲ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾಯಕ ಗುರುಕಿರಣ್ ರಸಮಂಜರಿ, ಎರಡನೇ ದಿನ ಗಾಯಕಿ ಅರ್ಚನಾ ಉಡುಪ ತಂಡದ ರಸಮಂಜರಿ ವಿಶೇಷ ಆಕರ್ಷಣೆಯಾಗಿದೆ.

ಶಾಸಕ ಹೆಬ್ಬಾರ ಮಾತನಾಡಿ, 'ಬನವಾಸಿ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ. ಬನವಾಸಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹5 ಕೋಟಿ ಬಿಡುಗಡೆಯಾಗಿದ್ದು, ಕುಡಿಯುವ ನೀರು, ಶೌಚಾಲಯ, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಐತಿಹಾಸಿಕ ಮಧುಕೇಶ್ವರ ದೇವಾಲಯಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶ ವಾಗಿದೆ' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry