ಕತ್ತು ಸೀಳುವೆ: ಕೇಂದ್ರ ಸಚಿವ ಆರ್‌.ಕೆ. ಸಿಂಗ್‌

7

ಕತ್ತು ಸೀಳುವೆ: ಕೇಂದ್ರ ಸಚಿವ ಆರ್‌.ಕೆ. ಸಿಂಗ್‌

Published:
Updated:

ಪಟ್ನಾ: ‘ಸರಿಯಾಗಿ ಕೆಲಸ ಮಾಡದ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಕುತ್ತಿಗೆ ಸೀಳುತ್ತೇನೆ. ಕೇಸು ದಾಖಲಿಸಿ, ಜೈಲಿಗೆ ಹಾಕಿಸುತ್ತೇನೆ’ ಎಂದು ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಆರ್‌.ಕೆ.ಸಿಂಗ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ತಮ್ಮ ಲೋಕಸಭಾ ಕ್ಷೇತ್ರ ಬಿಹಾರದ ಅರಾದಲ್ಲಿ ಸಂಸದರ ನಿಧಿಯಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನೆ ವೇಳೆ ಅವರು ಈ ಮಾತು ಹೇಳಿದ್ದಾರೆ. ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲವೆಂದು ಅವರು ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ‘ಅಭಿವೃದ್ಧಿ ಕಾರ್ಯಕ್ರಮಗಳಿಂದ ಜನರಿಗೆ ಅನುಕೂಲವಾಗುವಂತಿರಬೇಕು. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಬರುವ ಮೊದಲು ಆರ್‌.ಕೆ.ಸಿಂಗ್ ಐಎಎಸ್ ಅಧಿಕಾರಿಯಾಗಿದ್ದು, ಬಿಹಾರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿವಿಧ ಉನ್ನತ ಹುದ್ದೆಗಳನ್ನು ನಿರ್ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry