ಬಿಜೆಪಿ ಮುಖಂಡರ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

7

ಬಿಜೆಪಿ ಮುಖಂಡರ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಪಕ್ಷದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಘಟಕದ ಮಾಹಿತಿ ತಂತ್ರಜ್ಞಾನ ವಿಭಾಗದ ನೇತೃತ್ವದಲ್ಲಿ, ನಡೆದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ‘ಬಿಜೆಪಿಯದ್ದು ಜೈಲು ಹಕ್ಕಿಗಳ ಪಕ್ಷ’ ಎಂಬ ಘೋಷಣಾ ಫಲಕವನ್ನು ಪ್ರದರ್ಶಿಸಿದರು.

‘2008ರಿಂದ 2013ರವರೆಗೆ ಆಡಳಿತ ನಡೆಸಿದ್ದ ಬಿಜೆಪಿ, ಮೂವರು ಮುಖ್ಯಮಂತ್ರಿಯನ್ನು ಬದಲಾಯಿಸಿದ್ದು ಏಕೆ ಎಂಬುದು ಜನರಿಗೆ ಗೊತ್ತಿದೆ. ಅಂಥ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪಗೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು’ ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry