‘ಪೋಲಿಯೊ ಮುಕ್ತ ದೇಶಕ್ಕೆ ಸಹಕರಿಸಿ’

7

‘ಪೋಲಿಯೊ ಮುಕ್ತ ದೇಶಕ್ಕೆ ಸಹಕರಿಸಿ’

Published:
Updated:

ಯಾದಗಿರಿ: ‘ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹಾಕಿಸುವ ಮೂಲಕ ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿದರು.

ನಗರದ ಅಜೀಜ್ ಕಾಲೊನಿಯಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಹಮ್ಮಿಕೊಂಡಿ ಮೊದಲ ಹಂತದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶವನ್ನು ಪೋಲಿಯೊ ಮುಕ್ತವಾಗಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹಾಕಿಸುವಲ್ಲಿ ನಿರ್ಲಕ್ಷ್ಯ ವಹಿಸಬಾರದು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಬೇಕು. ಒಂದು ಮಗುವೂ ಪೊಲಿಯೊ ಲಸಿಕೆಯಿಂದ ವಂಚಿತವಾಗಬಾರದು’ ಎಂದರು

ಜಿಲ್ಲಾ ಆರೋಗ್ಯಾಧಿಕಾರಿ ಡಾ.ನರಸಿಂಹಲು ಮಾತನಾಡಿ,‘ಜಿಲ್ಲೆಯಲ್ಲಿ ಮೊದಲ ಸುತ್ತಿನ ಕಾರ್ಯಕ್ರಮದಲ್ಲಿ ಒಟ್ಟು 1,49, 527 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 648 ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಒಟ್ಟು 697 ತಂಡಗಳನ್ನು ರಚಿಸಲಾಗಿದೆ. 39 ಸಂಚಾರ ಬೂತ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜ.29 ರಿಂದ ಜ.31ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲು ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಆರೋಗ್ಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಹೊನಗೇರಾ, ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ, ಸಿಡಿಪಿಒ ರೆಹಮಾನ್, ನಾಜೀಂ ಅಹ್ಮದ್, ಜಿಲ್ಲಾ ಕುಷ್ಠರೋಗ ನಿಯಂತ್ರಾಧಿಕಾರಿ ಡಾ.ಭಗವಂತ ಅನವಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಲ್ಲಪ್ಪ, ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಮುಖ್ಯಗುರು ಅಮೀನಾ ರೋಹಿ, ಆರೋಗ್ಯ ಸಿಬ್ಬಂದಿ ಕಂಟೆಪ್ಪ ಕ್ಯಾದೆ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry