ಕನಕಗಿರಿ ತಾಲ್ಲೂಕು ಉದ್ಘಾಟನೆ ಇಂದು

6

ಕನಕಗಿರಿ ತಾಲ್ಲೂಕು ಉದ್ಘಾಟನೆ ಇಂದು

Published:
Updated:

ಕನಕಗಿರಿ: ಎರಡು ದಶಕಗಳ ಹೋರಾಟದ ಫಲದಿಂದ ರಾಜ್ಯ ಸರ್ಕಾರ ಕನಕಗಿರಿಯನ್ನು ತಾಲ್ಲೂಕು ಕೇಂದ್ರ ಎಂದು ಘೋಷಣೆ ಮಾಡಿ ಅನುಷ್ಠಾನಕ್ಕೆ ತರುತ್ತಿದ್ದು, ಜ.29ರಂದು ತಾಲ್ಲೂಕು ಉದ್ಘಾಟನೆ ಸಮಾರಂಭ ನಡೆಯಲಿದೆ.

ಸುವರ್ಣಗಿರಿ ಸಂಸ್ಥಾನ ವಿರಕ್ತಮಠದಿಂದ ಬೆಳಿಗ್ಗೆ 10.30 ಗಂಟೆಗೆ ಆರಂಭವಾಗುವ ತಾಯಿ ಭುವನೇಶ್ವರಿ ತಾಯಿಯ ಭಾವಚಿತ್ರ ಹಾಗೂ ವಿವಿಧ ಕಲಾ ತಂಡಗಳ ಮೆರವಣಿಗೆ ರಾಜಬೀದಿ ಮೂಲಕ ವೇದಿಕೆ ವರೆಗೆ ನಡೆಯಲಿದೆ. ಸ್ಥಳೀಯ ಮುಖಂಡರು ಊಟದ ವ್ಯವಸ್ಥೆ ಮಾಡುವರು.

ಇಲ್ಲಿನ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಉದ್ಘಾಟಿಸುವರು. ಶಾಸಕ ಶಿವರಾಜ ತಂಗಡಗಿ ಅಧ್ಯಕ್ಷತೆ ವಹಿಸುವರು. ಜಿ.ಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಇಕ್ಬಾಲ್ ಅನ್ಸಾರಿ, ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ ಹಾಗೂ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry