ಜಿಲ್ಲೆಯಾದ್ಯಂತ ಪಲ್ಸ್‌ ಪೋಲಿಯೊ ಕಾರ್ಯಕ್ರಮ

7

ಜಿಲ್ಲೆಯಾದ್ಯಂತ ಪಲ್ಸ್‌ ಪೋಲಿಯೊ ಕಾರ್ಯಕ್ರಮ

Published:
Updated:

ಚಾಮರಾಜನಗರ: ಜಿಲ್ಲೆಯಾದ್ಯಂತ 0–5 ವರ್ಷದ ವಯಸ್ಸಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ಭಾನುವಾರ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಆಂದೋಲನಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ‘ಪೋಲಿಯೊ ಲಸಿಕೆ ಆಂದೋಲನವು 15 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ರಾಜ್ಯದಲ್ಲಿ 5 ವರ್ಷದಿಂದ ಯಾವುದೇ ಪೋಲಿಯೊ ಪ್ರಕರಣ ಕಂಡುಬಂದಿಲ್ಲ. ಆದರೂ, ಪೋಲಿಯೊದಲ್ಲಿನ ವಿವಿಧ ವೈರಸ್‌ಗಳನ್ನು ಸಂಪೂರ್ಣವಾಗಿ ಹತೋಟಿಗೆ ತರಬೇಕು. ಅಂತಹ ಪ್ರಕರಣ ವರದಿಯಾಗಬಾರದು ಎಂಬ ಮುನ್ನೆಚ್ಚರಿಕೆಯಿಂದ ಪ್ರತಿ ವರ್ಷ ಎರಡು ಸುತ್ತು ಲಸಿಕೆ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮೂರು ದಿನದಲ್ಲಿ ಸುಮಾರು 75,000 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. 622 ಬೂತ್‌ಗಳನ್ನು ರಚಿಸಲಾಗಿದ್ದು, ಒಂದು ಬೂತ್‌ನಲ್ಲಿ ಸರಾಸರಿ 200 ಮಕ್ಕಳಿಗೆ ಲಸಿಕೆ ಹಾಕುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸುಮಾರು 2,500 ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ವಿವಿಧ ಇಲಾಖೆಯ ಸಿಬ್ಬಂದಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ ಕುಮಾರ್‌, ಜಿಲ್ಲಾ ಶಸ್ತ್ರಚಿಕಿತ್ಸಕ ರಘುರಾಂ ಸರ್ವೇಗಾರ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಇತರರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry