ಸೂಲಗಿತ್ತಿ ನರಸಮ್ಮ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲು

7

ಸೂಲಗಿತ್ತಿ ನರಸಮ್ಮ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲು

Published:
Updated:
ಸೂಲಗಿತ್ತಿ ನರಸಮ್ಮ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲು

ತುಮಕೂರು: ನಗರದ ಆದರ್ಶ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಪದ್ಮಶ್ರೀ ಗೌರವಕ್ಕೆ ಭಾಜನರಾದ ಸೂಲಗಿತ್ತಿ ನರಸಮ್ಮ ಅವರನ್ನು ಸೋಮವಾರ ಬೆಳಿಗ್ಗೆ ಬೆಂಗಳೂರಿಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿದೆ.

ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಉಸಿರಾಟ ಹಾಗೂ ಮೂಳೆ ಸವೆತಕ್ಕೆ ಸಂಬಂಧಿಸಿದಂತೆ ಒಂದು ತಿಂಗಳಿಂದ ತುಮಕೂರಿನ ಆದರ್ಶ ನರ್ಸಿಂಗ್ ಹೋಮ್‌ನಲ್ಲಿ  ನಮ್ಮ ತಾಯಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಿಗ್ಗೆ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಯಿತು. ವೈದ್ಯರ ಸಲಹೆ ಮೇರೆಗೆ ಇಲ್ಲಿಗೆ ಕರೆ ತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ನರಸಮ್ಮ ಅವರ ಪುತ್ರ ಪಾವಗಡ ಶ್ರೀರಾಮ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಸಂಜೆ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಮತ್ತೆ ತುಮಕೂರಿನ ಆದರ್ಶ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ ಮುಂದುವರಿಯಲಿದೆ’ ಎಂದು ಹೇಳಿದರು.

ಬೆಂಗಳೂರಲ್ಲೇ ನರಸಮ್ಮಗೆ ಚಿಕಿತ್ಸೆ ಮುಂದುವರಿಕೆ

ತುಮಕೂರು: ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡು ಸೋಮವಾರ ಬೆಂಗಳೂರು ಕನ್ನಿಂಗ್ಯಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಸೂಲಗಿತ್ತಿ ನರಸಮ್ಮ ಅವರಿಗೆ ಅಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ನರಸಮ್ಮ ಅವರ ಪುತ್ರ ಪಾವಗಡ ಶ್ರೀರಾಮ ತಿಳಿಸಿದ್ದಾರೆ.

ಈ ದಿನ ಚಿಕಿತ್ಸೆ ಪಡೆದು ಮತ್ತೆ ಸಂಜೆ ತುಮಕೂರಿನ ಆದರ್ಶ ನರ್ಸಿಂಗ್ ಹೋಮ್ ಗೆ ಕರೆದುಕೊಂಡು ಹೋಗುವ ಉದ್ದೇಶವಿತ್ತು. ಆದರೆ, ವೈದ್ಯರ ಸಲಹೆ ಮೇರೆಗೆ ಇಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry