ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರೈಮಾಸಿಕ ಫಲಿತಾಂಶ, ಆರ್ಥಿಕ ಸಮೀಕ್ಷೆಯ ಪ್ರಭಾವ: ನಿಲ್ಲದ ದಾಖಲೆ ಓಟ

Last Updated 29 ಜನವರಿ 2018, 20:01 IST
ಅಕ್ಷರ ಗಾತ್ರ

ಮುಂಬೈ: ಕಾರ್ಪೊರೇಟ್‌ಗಳ ತ್ರೈಮಾಸಿಕ ಹಣಕಾಸು ಸಾಧನೆ ಮತ್ತು 2017–18ನೇ ಸಾಲಿನ  ಆರ್ಥಿಕ ಸಮೀಕ್ಷೆಯು ಷೇರುಪೇಟೆಯಲ್ಲಿ ಸೋಮವಾರ ಮತ್ತೊಂದು ದಾಖಲೆಯ ವಹಿವಾಟು ನಡೆಯುವಂತೆ ಮಾಡಿದವು.

ಸಮೀಕ್ಷೆಯ ಸಕಾರಾತ್ಮಕ ವರದಿಯಿಂದ ಷೇರುಪೇಟೆ ಸಂಭ್ರಮಿಸಿತು. ವಹಿವಾಟು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುವಂತಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 233 ಅಂಶ ಏರಿಕೆ ದಾಖಲಿಸಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 36,283 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು. ಜನವರಿ 24 ರಂದು 36,162 ಅಂಶಗಳ ಗರಿಷ್ಠ ಮಟ್ಟವನ್ನು ತಲುಪಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 61 ಅಂಶ ಹೆಚ್ಚಾಗಿ 11,130 ಅಂಶಗಳ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯವಾಯಿತು. ಜನವರಿ 24 ರಂದು 11,086 ಅಂಶಗಳ ಗರಿಷ್ಠ ಮಟ್ಟದಲ್ಲಿತ್ತು.

2018–19ರಲ್ಲಿ ಜಿಡಿಪಿ ಪ್ರಗತಿ ಶೇ 7 ರಿಂದ ಶೇ 7.5 ರಲ್ಲಿ ಇರಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಅಂದಾಜು ಮಾಡಲಾಗಿದೆ. ಇದು ಷೇರುಪೇಟೆಯಲ್ಲಿ ಉತ್ತಮ ವಹಿವಾಟು ನಡೆಯುವಂತೆ ಮಾಡಿತು ಎಂದು ತಜ್ಞರು ಹೇಳಿದ್ದಾರೆ.

ಇನ್ನು, ತ್ರೈಮಾಸಿಕ ಫಲಿತಾಂಶವೂ ಮಾರುಕಟ್ಟೆಯ ನಿರೀಕ್ಷೆಯಂತೆಯೇ ಇರುವುದರಿಂದ ಹೂಡಿಕೆ ಪ್ರಮಾಣ ಹೆಚ್ಚಾಗುತ್ತಿದ್ದು ಸೂಚ್ಯಂಕಗಳು ಏರಿಕೆ ಕಾಣುವಂತಾಗಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ.

ಗುರುವಾರದ ವಹಿವಾಟಿನಲ್ಲಿ ವಿದೇಶಿ ಹೂಡಿಕೆದಾರರು ₹ 937 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರೆ, ದೇಶಿ ಸಾಂಸ್ಥಿಕ ಹೂಡಿಕೆದಾರರು ₹ 966 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT