ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ

7
ಪ್ರಸ್ತಾವ ಸಲ್ಲಿಸಲು ಏಪ್ರಿಲ್ 30 ಗಡುವು

ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ

Published:
Updated:

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮಾಧ್ಯಮ ವಿಭಾಗ ಆರಂಭಿಸುವ ಪ್ರಸ್ತಾವನೆಯನ್ನು ಏಪ್ರಿಲ್ 30ರೊಳಗೆ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

2018–19ರ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರೌಢಶಾಲೆ ವಿಭಾಗಗಳ ಎಂಟನೆ ತರಗತಿಯಲ್ಲಿ ಕನ್ನಡ ಮತ್ತು ಉರ್ದು ಮಾಧ್ಯಮದ ಜತೆಗೆ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಅನುಮತಿ ಕೋರಿ ಸಲ್ಲಿಸುವ ಪ್ರಸ್ತಾವನೆಯನ್ನು ಸಕಾಲದಲ್ಲಿ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲೆಯ ಉಪನಿರ್ದೇಶಕರಿಗೆ ಸುತ್ತೋಲೆ ಕಳುಹಿಸಲಾಗಿದೆ.

ಶಾಲೆಯಲ್ಲಿನ ಹಾಜರಾತಿ, ಇಂಗ್ಲಿಷ್ ಬೋಧನೆ ಮಾಡುವುದಾಗಿ ಶಿಕ್ಷಕರಿಂದ ಒಪ್ಪಿಗೆ ಪತ್ರ, ಇಂಗ್ಲಿಷ್ ಮಾಧ್ಯಮಕ್ಕೆ ದಾಖಲಾಗಬಹುದಾದ ವಿದ್ಯಾರ್ಥಿಗಳ ಸಂಖ್ಯೆಯ ಮಾಹಿತಿ ಸಹಿತ ಪ್ರಸ್ತಾವನೆ ಸಲ್ಲಿಸಬೇಕು. ಒಂದು ವೇಳೆ ಶಿಕ್ಷಕರು ಹಾಗೂ ಕೊಠಡಿ ಇಲ್ಲದೇ ಇದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿ ಹಂತದಲ್ಲೇ ‍ಪ್ರಸ್ತಾವನೆ ತಿರಸ್ಕರಿಸಬೇಕು ಎಂದೂ ಸೂಚಿಸಲಾಗಿದೆ.

ಮಾರ್ಚ್‌ 15ರೊಳಗೆ ಶಾಲಾ ಮುಖ್ಯ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಏಪ್ರಿಲ್ 14ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾ ಉಪನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದೂ ತಿಳಿಸಲಾಗಿದೆ.

ಅಂತಿಮ ದಿನಾಂಕದ ಬಳಿಕ ಬರುವ ಯಾವುದೇ ಪ್ರಸ್ತಾವನೆಯನ್ನು ಪರಿಗಣಿಸುವುದಿಲ್ಲ ಎಂದು ಎಚ್ಚರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry