ತ್ರಿವಳಿ ತಲಾಖ್‌ ನಿಷೇಧಕ್ಕೆ ಬೆಂಬಲ

7
ಬಜೆಟ್‌ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಕೋವಿಂದ್‌ ಭಾಷಣ

ತ್ರಿವಳಿ ತಲಾಖ್‌ ನಿಷೇಧಕ್ಕೆ ಬೆಂಬಲ

Published:
Updated:
ತ್ರಿವಳಿ ತಲಾಖ್‌ ನಿಷೇಧಕ್ಕೆ ಬೆಂಬಲ

ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಗೌರವ ಮತ್ತು ಘನತೆಯ ಬದುಕು ಕಲ್ಪಿಸಿಕೊಡುವ ತ್ರಿವಳಿ ತಲಾಖ್‌ ನಿಷೇಧ ಮಸೂದೆಗೆ ಅಂಗೀಕಾರ ದೊರೆಯುವ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏಕಕಾಲಕ್ಕೆ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ನಡೆಸಲು ರಾಜಕೀಯ ಒಮ್ಮತಾಭಿಪ್ರಾಯ ರೂಪಿಸುವ ಬಗ್ಗೆಯೂ ಅವರು ಧ್ವನಿ ಎತ್ತಿದ್ದಾರೆ.

ಬಜೆಟ್‌ ಅಧಿವೇಶನದ ಆರಂಭಕ್ಕೂ ಮುನ್ನ ಸಂಸತ್‌ ಉಭಯ ಸದನಗಳನ್ನು ಉದ್ದೇಶಿಸಿ ಸೋಮವಾರ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಭಾಷಣ ಮಾಡಿದ ಅವರು, ಕೇಂದ್ರ ಸರ್ಕಾರದ ಸಾಧನೆಗಳನ್ನು ಅನಾವರಣಗೊಳಿಸಿದರು.

2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ವಿಷಯದಿಂದ ದೇಶದ ಆಂತರಿಕ ಭದ್ರತೆ ಸುಧಾರಣೆವರೆಗೆ ಹಲವು ವಿಷಯ

ಗಳನ್ನು 45 ನಿಮಿಷಗಳ ಭಾಷಣದಲ್ಲಿ ಪ್ರಸ್ತಾಪಿಸಿದರು.

‘ಆಧಾರ್‌’ನಿಂದಾಗಿ ಸರ್ಕಾರದ ಸೌಲಭ್ಯಗಳು ನೇರವಾಗಿ ಫಲಾನುಭವಿಗಳನ್ನು ತಲುಪಿದ ಕಾರಣ ಸರ್ಕಾರದ ಬೊಕ್ಕಸಕ್ಕೆ ₹ 57,000 ಕೋಟಿ ಉಳಿತಾಯವಾಗಿದೆ. ಸರ್ಕಾರ ಸುಮಾರು 400 ಯೋಜನೆಗಳಿಗೆ ಡಿಜಿಟಲ್ ಪಾವತಿ ವಿಧಾನ ಬಳಸುತ್ತಿದೆ ಎಂದು ಅವರು ತಿಳಿಸಿದರು.

‘ಸರ್ಕಾರ ಅಲ್ಪಸಂಖ್ಯಾತರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬದ್ಧವಾಗಿದೆ. ಅವರ ಓಲೈಕೆಗೆ ಅಲ್ಲ’ ಎಂದು ಕೋವಿಂದ್‌ ಹೇಳಿದರು.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿಗಳಾದ ಎಚ್‌.ಡಿ.ದೇವೇಗೌಡ, ಮನಮೋಹನ್‌ಸಿಂಗ್ ಮೊದಲ ಸಾಲಿನಲ್ಲಿ ಆಸೀನರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry