ಕಾಂಗ್ರೆಸ್‌ಗೆ ಮಾಜಿ ಸಚಿವ ಎಂ.ಸಿ ನಾಣಯ್ಯ

7

ಕಾಂಗ್ರೆಸ್‌ಗೆ ಮಾಜಿ ಸಚಿವ ಎಂ.ಸಿ ನಾಣಯ್ಯ

Published:
Updated:

ಮಡಿಕೇರಿ: ಮಾಜಿ ಸಚಿವ, ಜೆಡಿಎಸ್‌ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಶೀಘ್ರವೇ ಕಾಂಗ್ರೆಸ್‌ ಸೇರುವುದಾಗಿ ಸೋಮ

ವಾರ ರಾತ್ರಿ ನಡೆದ ಬೆಂಬಲಿಗರ ಸಭೆಯಲ್ಲಿ ಘೋಷಿಸಿದರು.

ಸಭೆಯಲ್ಲಿ ಬೆಂಬಲಿಗರ ಅಭಿಪ್ರಾಯ ಪಡೆದ ಬಳಿಕ ಕಾಂಗ್ರೆಸ್‌ ಸೇರುವ ನಿರ್ಧಾರ ಪ್ರಕಟಿಸಿದರು. ಪಕ್ಷ ಸೇರ್ಪಡೆ ವಿಚಾರ ಹಲವು ಚರ್ಚೆಗಳನ್ನು ಹುಟ್ಟುಹಾಕಿತ್ತು. ಬೆಂಬಲಿಗರು ಈವರೆಗೆ ನಾಲ್ಕು ಸಭೆ ನಡೆಸಿ ಕಾಂಗ್ರೆಸ್‌ ಸೇರುವಂತೆಯೇ ಕೋರಿಕೊಂಡಿದ್ದರು.

ಮುನಿಸು: ಕಳೆದ ಒಂದು ವರ್ಷದಿಂದ ನಾಣಯ್ಯ ಅವರು ಜೆಡಿಎಸ್‌ನಲ್ಲಿ ಸಕ್ರಿಯವಾಗಿರಲಿಲ್ಲ. ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಅವರಲ್ಲಿತ್ತು. ಮಡಿಕೇರಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಬಿ.ಎ.ಜೀವಿಜಯ ಹಾಗೂ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ನಾಣಯ್ಯ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೀವಿಜಯ ದೂರು ನೀಡಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry