ಸರ್ಕಾರಿ ಶಾಲೆಗಳ ಉಳಿವಿಗಾಗಿ 6ಕ್ಕೆ ಧರಣಿ ಸತ್ಯಾಗ್ರಹ

7

ಸರ್ಕಾರಿ ಶಾಲೆಗಳ ಉಳಿವಿಗಾಗಿ 6ಕ್ಕೆ ಧರಣಿ ಸತ್ಯಾಗ್ರಹ

Published:
Updated:

ಮಂಗಳೂರು: ಕರೆಂಕಿ ದುರ್ಗಾ ಫ್ರೆಂಡ್ಸ್‌ ಕ್ಲಬ್‌ ವತಿಯಿಂದ ಸರ್ಕಾರಿ ಶಾಲೆಗಳ ಉಳಿವಿಗಾಗಿ ಫೆ. 6ರಂದು ಧರಣಿ ಸತ್ಯಾಗ್ರಹವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದೆ ಎಂದು ಕ್ಲಬ್‌ ಅಧ್ಯಕ್ಷ ಪ್ರಕಾಶ್‌ ಅಂಚನ್‌ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಚಲೋ ಹೆಸರಿನಲ್ಲಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದ್ದು ಶಿಕ್ಷಣ ಪ್ರೇಮಿಗಳು, ಕನ್ನಡ ಸಂಘಟನೆಗಳು, ತಾರೆಯರು, ರಾಜ್ಯದ ಸರ್ಕಾರಿ ಶಾಲೆ ಮಕ್ಕಳು, ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಒಂದೇ ದೇಶ ಒಂದೇ ಶಿಕ್ಷಣ ಪದ್ಧತಿಯೊಂದಿಗೆ ಸಮಾನ ಶಿಕ್ಷಣ ನೀತಿಯನ್ನು ಸರ್ಕಾರ ಜಾರಿಗೊಳಿಸಬೇಕು, ಆರ್‌ಟಿಇ ಕಾಯ್ದೆ ರದ್ದುಗೊಳಿಸಿ ಸರ್ಕಾರಿ ಶಾಲೆಗಳನ್ನು ಕಾಪಾಡಬೇಕು ಒಂದರಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಶಿಕ್ಷಣ ಸಿಗಬೇಕು’ ಎಂದು ಆಗ್ರಹಿಸಿದರು. ನವೀನ್‌, ರಾಮಚಂದ್ರ ಪೂಜಾರಿ, ಧೀರಜ್‌, ಪುರುಷೋತ್ತಮ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry