ಡಾ.ಸಂಗನಬಸವ ಸ್ವಾಮೀಜಿಗೆ ರೇಣುಕಾಚಾರ್ಯ ಪ್ರಶಸ್ತಿ

7

ಡಾ.ಸಂಗನಬಸವ ಸ್ವಾಮೀಜಿಗೆ ರೇಣುಕಾಚಾರ್ಯ ಪ್ರಶಸ್ತಿ

Published:
Updated:
ಡಾ.ಸಂಗನಬಸವ ಸ್ವಾಮೀಜಿಗೆ ರೇಣುಕಾಚಾರ್ಯ ಪ್ರಶಸ್ತಿ

ಬಾಳೆಹೊನ್ನೂರು: ಇಲ್ಲಿನ ರಂಭಾಪುರಿ ಪೀಠದಿಂದ ಪ್ರತಿ ವರ್ಷ ನೀಡುವ ‘ಜಗದ್ಗುರು ರೇಣುಕಾಚಾರ್ಯ' ಪ್ರಶಸ್ತಿಗೆ ಹೊಸಪೇಟೆ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಡಾ. ಸಂಗನಬಸವ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಸನ್ನ ರೇಣುಕ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮಿ ಭಗವತ್ಪಾದರು ಪ್ರಕಟಿಸಿದರು.

‘ಫೆಬ್ರುವರಿ 28ರಂದು ಬಾಳೆ ಹೊನ್ನೂರಿನ ರಂಭಾಪುರಿ ಪೀಠದಲ್ಲಿ ನಡೆಯುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ರಥೋತ್ಸವದ ವೇಳೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹1ಲಕ್ಷ ನಗದು, ಕಂಚಿನ ಪತ್ರ, ಸ್ಮರಣಿಕೆ ಒಳಗೊಂಡಿದೆ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry