7

ಭಾರತದ ಟೆಕಿ ನಿಗೂಢ ಸಾವು

Published:
Updated:

ಹ್ಯೂಸ್ಟನ್‌ : ಭಾರತದ ಟೆಕಿ ವೆಂಕಣ್ಣಗಾರಿ ಕೃಷ್ಣ ಚೈತನ್ಯ (30) ಟೆಕ್ಸಾಸ್‌ನ ಆರ್ಲಿಂಗ್ಟನ್‌ನಲ್ಲಿ ತಾವು ಪೇಯಿಂಗ್‌ ಗೆಸ್ಟ್‌ ಆಗಿ ಉಳಿದುಕೊಂಡಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ತೆಲಂಗಾಣದಿಂದ ಮೂರು ವರ್ಷಗಳ ಹಿಂದೆ ಅಮೆರಿಕಕ್ಕೆ ಬಂದಿದ್ದ ಅವರು, ಕಾಗ್ನಿಜೆಂಟ್‌ ಟೆಕ್ನಾಲಜೀಸ್‌ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದರು.

‘ಚೈತನ್ಯ ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲ. ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲು ಅಗತ್ಯವಿರುವ ಸಾರಿಗೆ ವ್ಯವಸ್ಥೆಗೆ ಸಹಕರಿಸಲಾಗುವುದು’ ಎಂದು ಭಾರತದ ದೂತಾವಾಸ ಕಚೇರಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry