‘ನನಗೂ ಕೊಲೆ ಬೆದರಿಕೆ’

7

‘ನನಗೂ ಕೊಲೆ ಬೆದರಿಕೆ’

Published:
Updated:

ತುಮಕೂರು: ’ನನಗೂ ಕೊಲೆ ಬೆದರಿಕೆ ಬಂದಿತ್ತು. ಇದನ್ನು ಗೃಹ ಸಚಿವರ ಗಮನಕ್ಕೆ ತಂದಿದ್ದೆ. ಆದರೆ ಅವರು ಗಂಭೀರವಾಗಿ ಪರಿಗಣಿಸಲಿಲ್ಲ’ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ಶಾಸಕ ಸಿ.ಟಿ.ರವಿ ಅವರಿಗೆ ಬಂದಿರುವ ಕೊಲೆ ಬೆದರಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು. ‘ನಾವು ರಾಷ್ಟ್ರೀಯ ವಿಚಾರ ಹಿಡಿದು ಹೊರಟಿದ್ದೇವೆ. ಶಕ್ತಿಶಾಲಿಯಾಗಿದ್ದೇವೆ. ಯಾರ ಬೆದರಿಕೆಗೂ ಅಂಜುವುದಿಲ್ಲ’ ಎಂದರು.

‘ಬಿಜೆಪಿ ಘನತೆ ಕಡಿಮೆ ಮಾಡಲು ಓವೈಸಿ ಜತೆ ಸಂಪರ್ಕ ಇದೆ ಎಂಬುದನ್ನು ಬಿಂಬಿಸಲು ಕಾಂಗ್ರೆಸ್ಸಿನವರು ಶತ ಪ್ರಯತ್ನ ಮಾಡುತ್ತಿದ್ದಾರೆ.

ಯೋಗ್ಯತೆ ಇದ್ದರೆ ದಾಖಲೆ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry