ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಹೆಚ್ಚಿದೆ: ಸಚಿವ ಓಂ ಪ್ರಕಾಶ್ ರಾಜ್‌ಭರ್ ಆರೋಪ

7

ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಹೆಚ್ಚಿದೆ: ಸಚಿವ ಓಂ ಪ್ರಕಾಶ್ ರಾಜ್‌ಭರ್ ಆರೋಪ

Published:
Updated:
ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಹೆಚ್ಚಿದೆ: ಸಚಿವ ಓಂ ಪ್ರಕಾಶ್ ರಾಜ್‌ಭರ್ ಆರೋಪ

ಬಲಿಯಾ (ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅವರ ಸಂಪುಟದ ಸಚಿವರೇ ಆರೋಪಿಸಿದ್ದಾರೆ.

‘ಸಮಾಜವಾದಿ ಪಕ್ಷ (ಎಸ್) ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಈಗಿನ ಬಿಜೆಪಿ ಸರ್ಕಾರದಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚಿಸಿದ್ದೇನೆ’ ಎಂದು ಸಚಿವ ಓಂ ಪ್ರಕಾಶ್ ರಾಜ್‌ಭರ್ ಹೇಳಿದ್ದಾರೆ. ಇವರು, ಆಡಳಿತಾರೂಢ ಮಿತ್ರ ಪಕ್ಷ ಸುಹೆಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥರೂ ಆಗಿದ್ದಾರೆ. ಈ ಪಕ್ಷದ ಜತೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಕಾಸ್‌ಗಂಜ್‌ನಲ್ಲಿ ನಡೆದ ಹಿಂಸಾಚಾರಕ್ಕೆ ರಾಜ್‌ಭರ್  ಮರುಕ ವ್ಯಕ್ತಪಡಿಸಿದ್ದಾರೆ.

ಸಚಿವರ ಹೇಳಿಕೆ ಬಗ್ಗೆ ಬಿಜೆಪಿ ಉತ್ತರ ಪ್ರದೇಶ ಘಟಕದ ವಕ್ತಾರ ರಾಕೇಶ್ ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದು, ಪ್ರಚಾರಕ್ಕಾಗಿ ರಾಜ್‌ಭರ್ ಇಂತಹ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ’ ಎಂದು ದೂರಿದ್ದಾರೆ. ಜತೆಗೆ, ಚುನಾವಣಾಪೂರ್ವ ಮೈತ್ರಿ ಕಡಿದುಕೊಳ್ಳುವ ಯೋಚನೆ ಇಲ್ಲ ಎಂದೂ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry