ಓವೈಸಿ– ಬಿಜೆಪಿ ಒಳ ಒಪ್ಪಂದ ಬಹಿರಂಗಕ್ಕೆ ಎಚ್‌ಡಿಕೆ ಆಗ್ರಹ

7

ಓವೈಸಿ– ಬಿಜೆಪಿ ಒಳ ಒಪ್ಪಂದ ಬಹಿರಂಗಕ್ಕೆ ಎಚ್‌ಡಿಕೆ ಆಗ್ರಹ

Published:
Updated:

ವಿಜಯಪುರ: ‘ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಇದ್ದರೆ ಅದನ್ನು ಗೃಹ ಸಚಿವ ರಾಮಲಿಂಗಾರೆಡ್ಡಿ ಬಹಿರಂಗಪಡಿಸಬೇಕು’ ಎಂದು ಜೆಡಿಎಸ್‌ ರಾಜ್ಯ ಘಟಕದ

ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಇಲ್ಲಿ ಒತ್ತಾಯಿಸಿದರು.

‘ಮುಸ್ಲಿಮರ ಮತಗಳು ಕೈತಪ್ಪಲಿವೆ ಎನ್ನುವ ಭಯದಿಂದ ಕಾಂಗ್ರೆಸ್‌ ಮುಖಂಡರು ಈ ರೀತಿಯ ಊಹಾಪೋಹದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಚುನಾವಣಾ ಪೂರ್ವದಲ್ಲಿ ಬಿಜೆಪಿಯವರು ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಾರೆ. ನಂತರದ ವಿದ್ಯಮಾನ ನೋಡಿಕೊಂಡು ಏನು ಮಾಡಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ’ ಎಂದು ಅವರು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮ ವಿಫಲವಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವ ಸಮೂಹ ಬೇಸತ್ತು ಪಕೋಡ ಮಾಡಲು ಬೀದಿಗಿಳಿಯುವಂತಾಗಿದೆ’ ಎಂದು ಅವರು ಟೀಕಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry