ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕು: ನಾಸಿರ್ ಉಲ್ ಇಸ್ಲಾಂ ಕರೆ

7

ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕು: ನಾಸಿರ್ ಉಲ್ ಇಸ್ಲಾಂ ಕರೆ

Published:
Updated:
ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕು: ನಾಸಿರ್ ಉಲ್ ಇಸ್ಲಾಂ ಕರೆ

ಶ್ರೀನಗರ: ಭಾರತದ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ವೈಯಕ್ತಿಕ ಮಂಡಳಿಯ ಉಪಾಧ್ಯಕ್ಷ ಮುಫ್ತಿ ನಾಸಿರ್ ಉಲ್ ಇಸ್ಲಾಂ ಕರೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಅಕ್ರಮವಾಗಿ ಕಾಶ್ಮೀರವನ್ನು ಅತಿಕ್ರಮಿಸಿಕೊಂಡಿದೆ ಎಂದು ಹೇಳಿದ್ದಾರೆ.

‘ಭಾರತ ಅಸಹಿಷ್ಣುತೆಯ ಹಾದಿಯಲ್ಲಿ ಸಾಗುತ್ತಿದೆ. ಲವ್ ಜಿಹಾದ್, ಗೋರಕ್ಷಣೆ, ತ್ರಿವಳಿ ತಲಾಖ್ ಹೆಸರಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ’ ಎಂದು ನಾಸಿರ್ ಹೇಳಿದ್ದಾರೆ.

ಭಾರತದಲ್ಲಿ ಮುಸ್ಲಿಮರದ್ದು ಎರಡನೇ ಅತಿ ದೊಡ್ಡ ಸಮುದಾಯವಾಗಿದೆ. ಇವರು ದೌರ್ಜನ್ಯ ಮತ್ತು ಕಿರುಕುಳ ಎದುರಿಸುವಂತಾಗಿದೆ. 17 ಕೋಟಿ ಮುಸ್ಲಿಮರಿಗಾಗಿ ಪಾಕಿಸ್ತಾನವನ್ನು ಸೃಷ್ಟಿಸಲಾಗಿತ್ತು. ಮುಸ್ಲಿಮರ ಮೇಲಿನ ದೌರ್ಜನ್ಯ ಹೀಗೆಯೇ ಮುಂದುವರಿದಲ್ಲಿ ಅವರು ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಬೇಕು ಎಂದು ನಾಸಿರ್ ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry