ಕಾಸ್‌ಗಂಜ್‌: ಚಂದನ್ ಗುಪ್ತಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

7

ಕಾಸ್‌ಗಂಜ್‌: ಚಂದನ್ ಗುಪ್ತಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

Published:
Updated:
ಕಾಸ್‌ಗಂಜ್‌: ಚಂದನ್ ಗುಪ್ತಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಲಖನೌ: ‘ಉತ್ತರ ಪ್ರದೇಶದ ಕಸ್‌ಗಂಜ್‌ನಲ್ಲಿ ಶುಕ್ರವಾರ ಗಣರಾಜ್ಯೋತ್ಸವದಂದು ‘ತಿರಂಗಾ ಜಾಥಾ’ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲುತೂರಾಟ ವೇಳೆ ನಡೆದಿದ್ದ ಚಂದನ್ ಗುಪ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಲೀಮ್‌ ಜಾವೆದ್‌ನನ್ನು ಪೊಲೀಸರು ಬಂಧಿಸಿದ್ದಾರೆ. 

ಪ್ರಕರಣ ಸಂಬಂಧ ತನಿಖೆ ನಡೆಸಿದ ಸ್ಥಳೀಯ ಪೊಲೀಸರು ಸಲೀಮ್‌ ಜಾವೆದ್‌ನನ್ನು ಬುಧವಾರ ಬಂಧಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್.ಪಿ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

ಸಲೀಮ್‌ ಜಾವೆದ್‌ ಹಾಗೂ ಆತನ ಸಹೋದರರಾದ ವಸೀಮ್‌ ಮತ್ತು ನಸೀಮ್‌ ಸೇರಿದಂತೆ 17 ಮಂದಿ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. 

ಕಳೆದ ಶನಿ‌ವಾರ ರಾತ್ರಿ ಸಲೀಮ್ ಜಾವೆದ್‌ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಒಂದು ಬಂದೂಕು, ಕಚ್ಚಾ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದರು.

ಆರ್‌ಎಸ್‌ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಗಣರಾಜ್ಯೋತ್ಸವದಂದು ಹಮ್ಮಿಕೊಂಡಿದ್ದ ‘ತಿರಂಗಾ ಬೈಕ್ ರ‍್ಯಾಲಿ’ ವೇಳೆ ಎರಡು ಗುಂಪುಗಳ ನಡುವೆ ಉಂಟಾದ ಗಲಭೆಯಲ್ಲಿ ಚಂದನ್ ಗುಪ್ತಾ ಮೃತಪಟ್ಟಿದ್ದ.

ಇದನ್ನೂ ಓದಿ...

ಸತ್ತಿದ್ದ ಎಂದು ಸುದ್ದಿಯಾದವ ಬಂದ..

ಧರ್ಮದ ಹೆಸರಲ್ಲಿ ಬೇರಾದವರು, ನೋವಿನಲ್ಲಿ ಒಂದಾದರು: ನ್ಯಾಯಕ್ಕಾಗಿ ಹೋರಾಡುತ್ತಿವೆ ಬಂಧಿತರ ಕುಟುಂಬಗಳು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry