ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷೆ ಮುಂದೂಡಿಕೆ

7

ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷೆ ಮುಂದೂಡಿಕೆ

Published:
Updated:
ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ: ಫೆ. 23ರಿಂದ 26ರವರೆಗೆ ನಿಗದಿಯಾಗಿದ್ದ ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ.

‘ಹಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ವಿಷಯಗಳನ್ನು ತೆಗೆದುಕೊಂಡಿರುತ್ತಾರೆ. ವಿಷಯವಾರು ಪರೀಕ್ಷೆಯ ದಿನಾಂಕ ನಿಗದಿ ಕಾರ್ಯ ನಡೆಯುತ್ತಿದ್ದು, ಮಾರ್ಚ್‌ ಮೊದಲ ಅಥವಾ ಎರಡನೇ ವಾರದಲ್ಲಿ ಪರೀಕ್ಷೆ ನಡೆಯಲಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಎಸ್‌.ಎನ್. ಗಂಗಾಧರಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ಗುರುವಾರ ಸಂಜೆ ಅಥವಾ ಶುಕ್ರವಾರ ಬೆಳಿಗ್ಗೆ ಪರೀಕ್ಷೆಯ ದಿನಾಂಕವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು’ ಎಂದು ಅವರು ತಿಳಿಸಿದರು.

ಫೆಬ್ರುವರಿಯಲ್ಲಿ ರಾಜ್ಯಬಜೆಟ್‌ ಕಾರ್ಯ, ಮಾರ್ಚ್‌ನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆ ಹಾಗೂ ನಂತರ ಚುನಾವಣೆ ಇರುವುದರಿಂದ ಪರೀಕ್ಷೆ ಸದ್ಯಕ್ಕೆ ನಡೆಯುವುದಿಲ್ಲ ಎಂಬ ಸುದ್ದಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಅವರು ಈ ಸ್ಪಷ್ಟನೆ ನೀಡಿದ್ದಾರೆ.

1131 ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯುತ್ತಿದೆ. 2015ರಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry