ಗುಂಡಿನ ದಾಳಿ: ಮತ್ತೊಬ್ಬನ ಸಾವು

7

ಗುಂಡಿನ ದಾಳಿ: ಮತ್ತೊಬ್ಬನ ಸಾವು

Published:
Updated:
ಗುಂಡಿನ ದಾಳಿ: ಮತ್ತೊಬ್ಬನ ಸಾವು

ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಬುಧವಾರ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಈ ಮೂಲಕ, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಗೆ ದಾಖಲಾಗಿದ್ದ ರಯೀಸ್ ಅಹ್ಮದ್ (19) ಚಿಕಿತ್ಸೆಗೆ ಸ್ಪಂದಿಸದೇ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಸೇನೆಯ ಗುಂಡಿಗೆ ಕಳೆದ 27ರಂದು ಇಬ್ಬರು ಬಲಿಯಾಗಿ, ರಯೀಸ್‌ ಸೇರಿದಂತೆ 9 ಮಂದಿ ಗಾಯಗೊಂಡಿದ್ದರು. ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ

ಸ್ವರಕ್ಷಣೆಗಾಗಿ ಗುಂಡು ಹಾರಿಸಲಾಗಿತ್ತು ಎಂದು ಸೇನೆ ಹೇಳಿತ್ತು.

ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೇನೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry