ಮಸ್ಕಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ: ಶಾಸಕ

7

ಮಸ್ಕಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ: ಶಾಸಕ

Published:
Updated:

ಮಸ್ಕಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು 30 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನಾಗಿ ಸರ್ಕಾರ ಮೇಲ್ದರ್ಜೆಗೆ ಏರಿಸಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ₹ 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿಜ್ಞಾನ ಪ್ರಯೋಗಾಲಯ ಕಟ್ಟಡ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಇಲ್ಲಿನ ಜನರ ಕನಸು ಸರ್ಕಾರ ನನಸು ಮಾಡಿದೆ, ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸುವುದರ ಜೊತೆಗೆ ₹ 2 ಕೋಟಿ ಅನುದಾನ ಬಿಡುಗಡೆ ಮಾಡಿ, ನೂತನ ಕಟ್ಟಡ ನಿರ್ಮಾಣಕ್ಕೆ ಟೆಂಡರ್‌ ಕೂಡ ಕರೆಯಲಾಗಿದೆ’ ಎಂದರು.

‘ನಾರಾಯಣಪುರ ಬಲದಂಡೆಯ 5ಎ ಕಾಲುವೆಯ ರೈತರ ಹೋರಾಟಕ್ಕೆ ನೈತಿಕ ಬೆಂಬಲ ಇದೆ. ಅವರನ್ನು ಈಗಾಗಲೇ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿಸಲಾಗಿದೆ. ಹೋರಾಟ ಸಮಿತಿಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಕೆಲ ಮುಖಂಡರು ಮಾಡಿದ ಆರೋಪ ಸತ್ಯಕ್ಕೆ ದೂರವಾಗಿದೆ’ ಎಂದರು,

ಕೆಪಿಸಿಸಿ ಸದಸ್ಯ ಅಂದಾನಪ್ಪ ಗುಂಡಳ್ಳಿ, ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ, ಡಾ, ಶಿವಶರಣಪ್ಪ ಇತ್ಲಿ, ಡಾ. ಬಿ.ಎಚ್‌. ದಿವಟರ್, ದೊಡ್ಡಪ್ಪ ಕಡಬೂರು, ಬಸನಗೌಡ ಪೊಲೀಸ್ ಪಾಟೀಲ, ಎಪಿಎಂಸಿ ಉಪಾಧ್ಯಕ್ಷ ಬಸ್ಸಪ್ಪ ಬ್ಯಾಳಿ, ಯಲ್ಲೋಜಿರಾವ್‌ ಕೊರೆಕಾರ, ಶಿವುಕುಮಾರ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪುರ, ಸುರೇಶ ಹರಸೂರು, ಪ್ರಸನ್ನ ಪಾಟೀಲ, ವೀರೇಶ ಪಾಟೀಲ, ಶರಣಯ್ಯ ಸೊಪ್ಪಿಮಠ, ಮಸೂದ್‌ ಪಾಷಾ ಶರಣಪ್ಪ ನಾಯಕ, ರಂಗಪ್ಪ ಅರಕೇರಿ, ನೀಲಕಂಠಪ್ಪ ಭಜಂತ್ರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry