ಸಿಂಧು ಸೋಲು ವೈಫಲ್ಯವಲ್ಲ: ಗೋಪಿಚಂದ್

7

ಸಿಂಧು ಸೋಲು ವೈಫಲ್ಯವಲ್ಲ: ಗೋಪಿಚಂದ್

Published:
Updated:

ನವದೆಹಲಿ: ‘ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಹಿಂದಿನ ಕೆಲವು ಟೂರ್ನಿಗಳಲ್ಲಿ ಪ್ರಶಸ್ತಿ ಗೆದ್ದಿಲ್ಲ. ಅವರ ಸೋಲನ್ನು ವೈಫಲ್ಯ ಎಂದು ಹೇಳಲು ಸಾಧ್ಯವಿಲ್ಲ’ ಎಂದು ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ.

‘ಉತ್ತಮವಾಗಿ ಆಡುತ್ತಿದ್ದ ದಿನಗಳಲ್ಲಿ ಸೋಲು ಎದುರಾದರೆ ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಪ್ರತಿ ಬಾರಿ ಭಾರತದವರೇ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರಲು ಸಾಧ್ಯವಿಲ್ಲ’ ಎಂದು ಗೋಪಿಚಂದ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry