ಭಾನುವಾರ, ಡಿಸೆಂಬರ್ 8, 2019
25 °C
ಅಧಿವೇಶನದಲ್ಲಿ ವಿರೋಧಪಕ್ಷಗಳ ಕಾರ್ಯತಂತ್ರ ಚರ್ಚೆ

ಸೋನಿಯಾ ಅಧ್ಯಕ್ಷತೆಯಲ್ಲಿ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

ಸೋನಿಯಾ ಅಧ್ಯಕ್ಷತೆಯಲ್ಲಿ ಸಭೆ

ನವದೆಹಲಿ:  ಸಂಸತ್ತಿನ ಬಜೆಟ್‌ ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸುವುದು ಮತ್ತು ಬಿಜೆಪಿ ವಿರುದ್ಧ ವಿರೋಧಪಕ್ಷಗಳಲ್ಲಿ ಏಕತೆ ಮೂಡಿಸುವ ಸಲುವಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು.

ಸಂಸತ್ತಿನ ಗ್ರಂಥಾಲಯದಲ್ಲಿ ನಡೆದ ಸಭೆಯಲ್ಲಿ 17 ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ವಿರುದ್ಧ ಈ 17 ಪಕ್ಷಗಳು ಒಂದುಗೂಡಿದ್ದವು.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಹಿರಿಯ ಮುಖಂಡರಾದ ಅಹ್ಮದ್‌ ಪಟೇಲ್‌, ಗುಲಾಂ ನಬಿ ಆಜಾದ್‌, ನ್ಯಾಷನಲ್‌ ಕಾನ್ಫರೆನ್ಸ್‌ನ ಫಾರೂಕ್‌ ಅಬ್ದುಲ್ಲಾ, ಆರ್‌ಜೆಡಿಯ ಪ್ರಕಾಶ್‌ ನಾರಾಯಣ್‌ ಯಾದವ್‌, ಸಿಪಿಐನ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸೋನಿಯಾ  ಅವರು ಕೆಳಗಿಳಿದ ನಂತರ ನಡೆದ ಮೊದಲ ಸಭೆ ಇದಾಗಿದೆ.

ತ್ರಿವಳಿ ತಲಾಖ್‌ ಮಸೂದೆ, ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳ ಬಿಕ್ಕಟ್ಟು, ಉತ್ತರ ‍ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕೋಮುಸಂಘರ್ಷ ಸೇರಿದಂತೆ ಇತರ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಪ್ರತಿಕ್ರಿಯಿಸಿ (+)