ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಗರ ಕೇಂದ್ರಿತ ಜ್ಞಾನ ವಿಸ್ತರಣೆ ಅಗತ್ಯ’

Last Updated 1 ಫೆಬ್ರುವರಿ 2018, 19:32 IST
ಅಕ್ಷರ ಗಾತ್ರ

ಬೆಂಗಳೂರು: ಯುವಪೀಳಿಗೆ ಹಾಗೂ ವಿದ್ಯಾರ್ಥಿಗಳಲ್ಲಿ ಜ್ಞಾನದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ, ಉಪನ್ಯಾಸಗಳನ್ನು ಆಲಿಸಿ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಅಧ್ಯಕ್ಷ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದರು.

ಜೈನ್ ವಿಶ್ವವಿದ್ಯಾಲಯ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ ವತಿಯಿಂದ ನಗರದಲ್ಲಿ ಬುಧವಾರ ಆಯೋಜಿಸಿದ್ದ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.

ಲೇಖನಗಳ ಹಾಗೂ ಪುಸ್ತಕಗಳ ಮೂಲಕ ಸ್ನಾತಕೋತ್ತರ ವಿದ್ಯಾರ್ಥಿಗಳು ಗುರುತಿಸಿಕೊಳ್ಳಬೇಕು. ನಗರ ಕೇಂದ್ರಿತ ಜ್ಞಾನವನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಬೇಕು. ಗ್ರಾಮೀಣ ಜನರ ಜ್ಞಾನದ ಮಟ್ಟ ಹೆಚ್ಚಿಸಲು ಕಾರ್ಯಾಗಾರಗಳನ್ನು ಮಾಡಬೇಕು. ಹೀಗಾಗಿ, ಕಿಕ್ಕೇರಿಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿಸುವ ಯೋಜನೆ ಇದೆ ಎಂದು ತಿಳಿಸಿದರು.

ವಿದೇಶಗಳ ಕೆಲವು ಪ್ರಸಿದ್ಧ ವಿಶ್ವವಿದ್ಯಾಲಯಗಳು ನೀಡುವ ಫೆಲೊಶಿಪ್‌ ಕರ್ನಾಟಕದ ಬಜೆಟ್‌ಗಿಂತ ಹೆಚ್ಚಿದೆ. ಜಗತ್ತಿನ ಅಗ್ರ 400 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ನಮ್ಮ ದೇಶದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮಾತ್ರ ಸ್ಥಾನ ಪಡೆದಿದೆ. ದೇಶದ ಶಿಕ್ಷಣ ವ್ಯವಸ್ಥೆ ಯಾವ ಹಂತದಲ್ಲಿದೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT