ಕೆಎಸ್‌ಒಯು ಪದವಿ ಮಾನ್ಯತೆ: ಹೈಕೋರ್ಟ್‌ಗೆ ವರದಿ ಸಲ್ಲಿಕೆ

7

ಕೆಎಸ್‌ಒಯು ಪದವಿ ಮಾನ್ಯತೆ: ಹೈಕೋರ್ಟ್‌ಗೆ ವರದಿ ಸಲ್ಲಿಕೆ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕೆಎಸ್ಒಯು) 2014–15 ಹಾಗೂ 2015–16ರಲ್ಲಿ ಅಭ್ಯಾಸ ಮಾಡಿರುವ ಅಭ್ಯರ್ಥಿಗಳ ಪದವಿ ಮಾನ್ಯತೆಗೆ ಸಂಬಂಧಿಸಿದಂತೆ ಕೆ.ರತ್ನಪ್ರಭಾ ಸಮಿತಿ ವರದಿ ಜಾರಿಗೊಳಿಸಲು ಅವಕಾಶ ಮಾಡಿಕೊಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಹೆಚ್ಚುವರಿ ಅಡ್ವೊಕೇಟ್‌ ಜನರಲ್ ಎ.ಎಸ್‌.ಪೊನ್ನಣ್ಣ ಗುರುವಾರ ರತ್ನಪ್ರಭಾ ಸಮಿತಿಯ ವರದಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸಲ್ಲಿಸಿದರು.‘ಅಭ್ಯರ್ಥಿಗಳ ವೃತ್ತಿ ಭವಿಷ್ಯಕ್ಕೆ ಅನುಕೂಲ ಕಲ್ಪಿಸಲು ಸರ್ಕರ ಬದ್ಧವಾಗಿದೆ. ಈ ವರದಿ ಅನುಷ್ಠಾನಗೊಳಿಸಲು ಅನುವು ಮಾಡಿ ನಿರ್ದೇಶಿಸಿ’ ಎಂದು ವಿನಂತಿಸಿದರು.

ರಾಜ್ಯ ಸರ್ಕಾರ ಕೆಎಸ್‌ಒಯು ಸಮಸ್ಯೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಇತ್ತೀಚೆಗೆ ರತ್ನಪ್ರಭಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry