ಭಾನುವಾರ, ಮೇ 31, 2020
27 °C
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯ: ಭಾರತಕ್ಕೆ 6 ವಿಕೆಟ್‌ ಜಯ

ಕಿಂಗ್ಸ್‌ಮೇಡ್‌ ಅಂಗಳದಲ್ಲಿ ‘ವಿರಾಟ’ ಶತಕ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕಿಂಗ್ಸ್‌ಮೇಡ್‌ ಅಂಗಳದಲ್ಲಿ ‘ವಿರಾಟ’ ಶತಕ

ಡರ್ಬನ್‌ : ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ (112; 119ಎ, 10ಬೌಂ) ಗುರುವಾರ ಕಿಂಗ್ಸ್‌ಮೇಡ್‌ ಅಂಗಳದಲ್ಲಿ ಗುಡುಗಿದರು.

ಕೊಹ್ಲಿ, ಅಮೋಘ ಶತಕದ ಬಲದಿಂದ ಭಾರತ ತಂಡ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತು. ಇದರೊಂದಿಗೆ ಪ್ರವಾಸಿ ಬಳಗ 6 ಪಂದ್ಯಗಳ ಸರಣಿಯಲ್ಲಿ 1–0ರ ಮುನ್ನಡೆ ತನ್ನದಾಗಿಸಿಕೊಂಡಿತು.

ಮೊದಲು ಬ್ಯಾಟ್‌ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 269ರನ್‌ ಗಳಿಸಿತು. ಈ ಗುರಿ ಕೊಹ್ಲಿ ಪಡೆಗೆ ಸವಾಲೆನಿಸಲೇ ಇಲ್ಲ. ಪ್ರವಾಸಿ ತಂಡ ಇನ್ನು 27 ಎಸೆತಗಳು ಬಾಕಿ ಇರುವಂತೆ 4 ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿತು.

ನಾಯಕ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ (79; 86ಎ, 5ಬೌಂ, 2ಸಿ) ಮೂರನೇ ವಿಕೆಟ್‌ಗೆ 189ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಭಾರತ: 45.3 ಓವರ್‌ಗಳಲ್ಲಿ 4 ವಿಕೆಟ್‌ಗೆ 270 (ರೋಹಿತ್‌ ಶರ್ಮಾ 20, ಶಿಖರ್‌ ಧವನ್‌ 35, ವಿರಾಟ್‌ ಕೊಹ್ಲಿ 112, ಅಜಿಂಕ್ಯ ರಹಾನೆ 79; ಆ್ಯಂಡಿಲೆ ಪೆಹ್ಲುಕವಾಯೊ 42ಕ್ಕೆ2).

ಫಲಿತಾಂಶ: ಭಾರತಕ್ಕೆ 6 ವಿಕೆಟ್‌ ಜಯ. 6 ಪಂದ್ಯಗಳ ಸರಣಿಯಲ್ಲಿ 1–0ರ ಮುನ್ನಡೆ.

ಪಂದ್ಯ ಶ್ರೇಷ್ಠ: ವಿರಾಟ್‌ ಕೊಹ್ಲಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.