ನಾನೂ ಆಕಾಂಕ್ಷಿ: ಎಸ್‌. ರುದ್ರೇಗೌಡ

7

ನಾನೂ ಆಕಾಂಕ್ಷಿ: ಎಸ್‌. ರುದ್ರೇಗೌಡ

Published:
Updated:

ಶಿವಮೊಗ್ಗ: ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ. ಆದರೆ, ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌. ರುದ್ರೇಗೌಡ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಲು ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಒಂದು ಹಂತದ ಸರ್ವೆ ಕಾರ್ಯ ನಡೆದಿದೆ. ಎರಡನೇ ಹಂತದ ಸರ್ವೆಯ ನಂತರವೇ ಅಂತಿಮ ಪಟ್ಟಿ ಹೊರಬೀಳುವ ನಿರೀಕ್ಷೆ ಇದೆ ಎಂದರು.

ಫೆ.15ರಂದು ಮೊದಲ ಪಟ್ಟಿ ಬಿಡುಗಡೆಯಾಗುವ ಕುರಿತು ಮಾಹಿತಿ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ಪರೋಕ್ಷವಾಗಿ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಕೆಲವು ಕ್ಷೇತ್ರಗಳಲ್ಲಿ ಗೊಂದಲವಿದೆ. ಯಾರಿಗೇ ಟಿಕೆಟ್‌ ನೀಡಿದರೂ ಬಿಜೆಪಿ ಗೆಲ್ಲಿಸುವುದೇ ಗುರಿ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry