ರಸ್ತೆಯಲ್ಲಿ ಹರಿಯುತ್ತಿರುವ ಕೊಳಚೆ

7

ರಸ್ತೆಯಲ್ಲಿ ಹರಿಯುತ್ತಿರುವ ಕೊಳಚೆ

Published:
Updated:

ಗುಂಡ್ಲುಪೇಟೆ: ಪಟ್ಟಣದಲ್ಲಿ ಚಾಮರಾಜನಗರ ರಸ್ತೆಯ ವಿಸ್ತರಣೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವುದರಿಂದ ಚರಂಡಿಯ ಕೊಳಚೆ ರಸ್ತೆ ಮೇಲೆ ಹರಿಯುತ್ತಿದ್ದು ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹಾಪ್‌ಕಾಮ್ಸ್ ಕಚೇರಿಯಿಂದ ಕೊಡಳ್ಳಿ ವೃತ್ತದ ಸಮೀಪದಲ್ಲಿ ಇರುವ ವೀರಯೋಧ ಶಿವಾನಂದ ಸರ್ಕಲ್ ತನಕ ಜೋಡಿ ರಸ್ತೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಕಾಂಕ್ರಿಟ್ ಚರಂಡಿ ಮಾಡಲಾಗುತ್ತಿದೆ. ಆದರೆ, ಅವೈಜ್ಞಾನಿಕವಾಗಿ ಕೆಲಸ ಮಾಡುತ್ತಿರುವುದರಿಂದ ಕೊಳಚೆ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಬೃಹತ್‌ ಗುಂಡಿಗಳು ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅವು ಕೊಳಚೆ ಮೇಲೆ ಹರಿದಾಗ ಪಾದಚಾರಿಗಳಿಗೆ, ಬೈಕ್‌, ಸ್ಕೂಟರ್‌ನಲ್ಲಿ ಸಾಗುತ್ತಿರುವವರಿಗೆ ಹಾರುತ್ತಿದೆ.

‘ಕಾಮಗಾರಿಯನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಸಂಬಂಧಪಟ್ಟ ಎಂಜಿನಿಯರ್ ಸಹ ಕಾಮಗಾರಿಯನ್ನು ಗಮನಿಸುತ್ತಿಲ್ಲ. ಅಂಗಡಿಗಳ ಬದಿಯಲ್ಲಿ ಚರಂಡಿ ನಿರ್ಮಾಣ ಮಾಡಲು ಮಣ್ಣನ್ನು ಅಗೆದು ಆಗಲೇ ತಿಂಗಳಾಯಿತು. ಇನ್ನೂ ತೆರವುಗೊಳಿಸಲಿಲ್ಲ. ಅಲ್ಲಿ ನಿಂತಿರುವ ಕೊಳಚೆಯ ವಾಸನೆ ಸಹಿಸಿಕೊಳ್ಳಲು ಆಗುತ್ತಿಲ್ಲ’ ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದರು.

‘ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು.ಇಲ್ಲದಿದ್ದರೆ ಮುಂದಿನ ದಿನದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry