ಅಜಿಂಕ್ಯ ರಹಾನೆ ನಾಲ್ಕನೆ ಕ್ರಮಾಂಕದಲ್ಲಿ ಆಡಲಿ: ಕೊಹ್ಲಿಗೆ ಅಭಿಮಾನಿಗಳಿಂದ ಮನವಿ

7

ಅಜಿಂಕ್ಯ ರಹಾನೆ ನಾಲ್ಕನೆ ಕ್ರಮಾಂಕದಲ್ಲಿ ಆಡಲಿ: ಕೊಹ್ಲಿಗೆ ಅಭಿಮಾನಿಗಳಿಂದ ಮನವಿ

Published:
Updated:
ಅಜಿಂಕ್ಯ ರಹಾನೆ ನಾಲ್ಕನೆ ಕ್ರಮಾಂಕದಲ್ಲಿ ಆಡಲಿ: ಕೊಹ್ಲಿಗೆ ಅಭಿಮಾನಿಗಳಿಂದ ಮನವಿ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮನ್‌ ಅಜಿಂಕ್ಯ ರಹಾನೆ ಅವರನ್ನು ನಾಲ್ಕನೆ ಕ್ರಮಾಂಕದಲ್ಲಿ ಆಡಸಿ ಎಂದು ಅಭಿಮಾನಿಗಳು ನಾಯಕ ವಿರಾಟ್‌ ಕೊಹ್ಲಿಗೆ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಡರ್ಬನ್‌ನಲ್ಲಿ ಗುರುವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 6 ವಿಕೆಟ್‌ ಜಯ ಸಾಧಿಸಿತ್ತು.

ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ (112; 119ಎ, 10ಬೌಂ), ಅಜಿಂಕ್ಯ ರಹಾನೆ (79; 86ಎ, 5ಬೌಂ, 2ಸಿ) ಮೂರನೇ ವಿಕೆಟ್‌ಗೆ 189ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ರಹಾನೆ ಅವರನ್ನು ನಾಲ್ಕನೆ ಕ್ರಮಾಂಕದಲ್ಲಿ ಆಡಿಸುವುದು ಸೂಕ್ತ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

*

*

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry