ಮಂಗಳವಾರ, ಡಿಸೆಂಬರ್ 10, 2019
20 °C

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದಾಗಿ ಪ್ರತಿಜ್ಞೆ ಕೈಗೊಂಡ ಐಪಿಎಸ್ ಅಧಿಕಾರಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದಾಗಿ ಪ್ರತಿಜ್ಞೆ ಕೈಗೊಂಡ ಐಪಿಎಸ್ ಅಧಿಕಾರಿ!

ಲಖನೌ: ಅಯೋಧ್ಯೆಯಲ್ಲಿ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರ ಪ್ರದೇಶದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ರಾಮ ಮಂದಿರ ನಿರ್ಮಾಣದ ಬಗ್ಗೆ ಪ್ರತಿಜ್ಞೆ ಸ್ವೀಕರಿಸಿದ್ದಾರೆ.

'ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣವಾಗಲಿ ಎಂದು ನಾವೆಲ್ಲಾ ರಾಮ ಭಕ್ತರು ಈ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಕೈಗೊಳ್ಳುತ್ತೇವೆ' ಎಂದು ಹೋಮ್ ಗಾರ್ಡ್ ಡಿಜಿ ಸೂರ್ಯ ಕುಮಾರ್ ಶುಕ್ಲಾ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಐಪಿಎಸ್ ಅಧಿಕಾರಿ ಮತ್ತು ಇತರರು ಪ್ರತಿಜ್ಞೆ ಸ್ವೀಕರಿಸುತ್ತಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಜನವರಿ 31ರಂದು ಲಖನೌ ವಿಶ್ವ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ಲಾ ಭಾಗವಹಿಸಿದ್ದರು.

ಆದಾಗ್ಯೂ,ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶುಕ್ಲಾ ಹೇಳಿದ್ದಾರೆ. ರಾಮ ಮಂದಿರ ವಿಷಯ ನ್ಯಾಯಾಲಯದಲ್ಲಿ, ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಕೋಮು ಸೌಹಾರ್ದತೆ ಬಗ್ಗೆ ನಾನು ಪ್ರತಿಜ್ಞೆ ಸ್ವೀಕರಿಸಿದ್ದೇನೆಯೇ ಹೊರತು ರಾಮ ಮಂದಿರದ ಬಗ್ಗೆ ಅಲ್ಲ ಎಂದು ಶುಕ್ಲಾ ಹೇಳಿರುವುದಾಗಿ ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

1982ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಶುಕ್ಲಾ ಆಗಸ್ಟ್ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ.

ಪ್ರತಿಕ್ರಿಯಿಸಿ (+)