ಗೋಹತ್ಯೆ ನಿಷೇಧ ಮಸೂದೆ ವಾಪಸ್

7

ಗೋಹತ್ಯೆ ನಿಷೇಧ ಮಸೂದೆ ವಾಪಸ್

Published:
Updated:

ನವದೆಹಲಿ: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ವಿವಾದಾತ್ಮಕ ಗೋಹತ್ಯೆ ನಿಷೇಧ ಮಸೂದೆಯನ್ನು ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ರಾಜ್ಯಸಭೆಯಲ್ಲಿ ಶುಕ್ರವಾರ ಹಿಂಪಡೆದರು.

ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಕೃಷಿ ಸಚಿವ ರಾಧಾಮೋಹನ್ ಸಿಂಗ್, ‘ ಕಳೆದ ಮೂರುವರೆ ವರ್ಷಗಳಲ್ಲಿ ಗೋ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗೋವುಗಳ ರಕ್ಷಣೆಗಾಗಿ ನಾವು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದೇ ದಿಕ್ಕಿನಲ್ಲಿ ಮುಂದುವರಿಯುವ ಭರವಸೆಯನ್ನು ಸ್ವಾಮಿ ಅವರಿಗೆ ನೀಡುತ್ತೇನೆ. ಮಸೂದೆಯನ್ನು ವಾಪಸ್ ಪಡೆಯುವಂತೆ ಅವರಿಗೆ ಮನವಿ ಮಾಡುತ್ತೇನೆ’ ಎಂದು ಸಿಂಗ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ವಾಮಿ,‘ಇದಕ್ಕಾಗಿ ಕಾನೂನು ಅಗತ್ಯವಿತ್ತು. ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡುತ್ತೇನೆ. ಹಾಲು ನೀಡುವುದನ್ನು ನಿಲ್ಲಿಸಿದ ಹಸುಗಳನ್ನು ನೋಡಿಕೊಳ್ಳಲು ಪ್ರತ್ಯೇಕ ಸೆಸ್ ಹಾಕುವ ಬಗ್ಗೆ ಸರ್ಕಾರ ಗಂಭೀರ ಆಚೋಚನೆ ನಡೆಸಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry