ಬಿಜೆಪಿ ಸೇರಿದ ಹಾಲಾಡಿ

7

ಬಿಜೆಪಿ ಸೇರಿದ ಹಾಲಾಡಿ

Published:
Updated:

ಬೆಂಗಳೂರು: ಕುಂದಾಪುರ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿಗೆ ಸೇರಿದರು.

ರಾಜ್ಯ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿ.ಎಸ್‌. ಯಡಿಯೂರಪ್ಪ, ಪಕ್ಷದ ಧ್ವಜ ನೀಡಿ ಅವರನ್ನು ಬರಮಾಡಿಕೊಂಡರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಶಾಸಕರಾಗಿದ್ದ ಹಾಲಾಡಿ, ತಮ್ಮನ್ನು ಕಡೆಗಣಿಸಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರು ಎಂಬ ಸಿಟ್ಟಿನಿಂದ ಪಕ್ಷ ತೊರೆದಿದ್ದರು. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಚುನಾಯಿತರಾಗಿದ್ದರು. ಶಾಸಕ ಸ್ಥಾನಕ್ಕೆ ಇತ್ತೀಚೆಗೆ ಅವರು ರಾಜೀನಾಮೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry