ತೆಂಗು ಬೆಳೆಗೆ ಪರಿಹಾರ: ಐದನೇ ದಿನಕ್ಕೆ ಅಹೋರಾತ್ರಿ ಧರಣಿ

7

ತೆಂಗು ಬೆಳೆಗೆ ಪರಿಹಾರ: ಐದನೇ ದಿನಕ್ಕೆ ಅಹೋರಾತ್ರಿ ಧರಣಿ

Published:
Updated:

ಅರಸೀಕೆರೆ: ತೆಂಗು ಬೆಳೆಗಾರರಿಗೆ ಪರಿಹಾರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಿ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡೆಸುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿತು. ತಾಲ್ಲೂಕಿನ ಗೀಜೀಹಳ್ಳಿಯ ರೈತರ ತೆಂಗಿನ ತೋಟದಲ್ಲಿ ಪ್ರತಿಭಟನೆ ಆರಂಭಿಸಲಾಗಿದೆ. ಗಮನ ಸೆಳೆಯುವ ಸಲುವಾಗಿ ತೋಟದಲ್ಲಿ ಶಾಸಕರು ಧರಣಿ ಆರಂಭಿಸಿದ್ದಾರೆ.

ಸರ್ಕಾರಗಳ ರೈತ ವಿರೋಧಿ ನೀತಿಯಿಂದ ಅವರ ಬದುಕು ಅತಂತ್ರವಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ಪರಿಹಾರ ವಿತರಿಸಿಲ್ಲ. ಕೇಂದ್ರ ಸರ್ಕಾರ ಬಜೆಟ್‌ನಲ್ಲೂ ಪರಿಹಾರ ಘೋಷಿಸಿಲ್ಲ ಎಂದು ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣ ಬಂದ್: ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಸ್ಪಂದಿಸದೆ ಇರುವುದನ್ನು ಖಂಡಿಸಿ ಫೆ. 3ರಂದು ಅರಸೀಕೆರೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry