ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್ ಅಸಾಂವಿಧಾನಿಕ: ಹೈಕೋರ್ಟ್‌

ಪಿಐಎಲ್‌: ಹೈಕೋರ್ಟ್ ಅಭಿಮತ
Last Updated 2 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಬಂದ್ ನಡೆಸುವುದು ಅಕ್ರಮ ಹಾಗೂ ಅಸಾಂವಿಧಾನಿಕ’ ಎಂದು ಹೈಕೋರ್ಟ್ ಹೇಳಿದೆ.

‘ಬಂದ್ ನಡೆಸುವುದು ಪ್ರಜೆಗಳ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆ. ಆದ್ದರಿಂದ ಇದೇ 4ರಂದು ಕನ್ನಡ ವಾಟಾಳ್‌ ಪಕ್ಷ ಕರೆ ನೀಡಿರುವ ಬಂದ್‌ ಅನುಷ್ಠಾನಗೊಳ್ಳದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿ ಇದೇ 4ರಂದು ಬೆಂಗಳೂರು ಬಂದ್‌ ಕರೆ ಕೊಟ್ಟಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಕ್ರಮವನ್ನು ಪ್ರಶ್ನಿಸಿ ರಾಜಾಜಿನಗರದ ‘ಶ್ರದ್ಧಾ ಪೋಷಕರ ಸಂಘ’ದ ಅಧ್ಯಕ್ಷ ಸಿ.ರಾಜಾ ಅವರು ಸಲ್ಲಿ
ಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ನೇತೃತ್ವದ ಪೀಠ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರನ್ನು, ‘ಬಂದ್ ನಿರ್ಬಂಧಿಸುವ ಕಾನೂನು ಎಲ್ಲಿದೆ’ ಎಂದು ಪ್ರಶ್ನಿಸಿತು.

ಇದಕ್ಕೆ, ಅರ್ಜಿದಾರರ ಪರ ಹಾಜರಿದ್ದ ಸುನೀಲ್ ಎಸ್. ರಾವ್, ಸುಪ್ರೀಂ ಕೋರ್ಟ್ ತೀರ್ಪಿನ ಪ್ರತಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ‘ಕಳೆದ ತಿಂಗಳ 25ರಂದು ರಾಜ್ಯದಾದ್ಯಂತ ಬಂದ್ ಕರೆ ನೀಡಲಾಗಿತ್ತು. ಆ ಬಂದ್‌ಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿತ್ತು’ ಎಂದೂ ದೂರಿದರು.

ಇದಕ್ಕೆ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಎಸ್. ಪೊನ್ನಣ್ಣ, ‘ಸರ್ಕಾರ ಬಂದ್‌ಗೆ ಬೆಂಬಲಿಸುವುದಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಬಂದ್ ಸಮಯದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಅದರಂತೆ ಫೆ.4ರಂದು ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT