‘ಕೊಲೆ ಆದವರೆಲ್ಲ ಬಿಜೆಪಿಯವರೇ?’

5

‘ಕೊಲೆ ಆದವರೆಲ್ಲ ಬಿಜೆಪಿಯವರೇ?’

Published:
Updated:

ಬೆಂಗಳೂರು: ಕೊಲೆ ಆದವರನ್ನೆಲ್ಲಾ ತಮ್ಮ ಪಕ್ಷದ ಕಾರ್ಯಕರ್ತರು ಎಂದು ಹೇಳಿಕೊಂಡು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಜೆ.ಸಿ. ನಗರದಲ್ಲಿ ನಡೆದ ಸಂತೋಷ್ ಕೊಲೆ ಪ್ರಕರಣವನ್ನು ಈಗಾಗಲೇ ಸಿಸಿಬಿಗೆ ವಹಿಸಲಾಗಿದೆ ಎಂದೂ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ತಿಳಿಸಿದರು.

‘ಕೊಲೆ ಯಾರದ್ದೇ ಆಗಿರಲಿ ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ’ ಎಂದರು.

ಗಾಂಜಾ ಮಾರಾಟದ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೊಲೆಯಾದ ಸಂತೋಷ್ ನಿವಾಸಕ್ಕೆ ಭೇಟಿ ನೀಡುತ್ತೀರಾ ಎಂದು ಕೇಳಿದಾಗ ಉತ್ತರ ನೀಡಲು ನಿರಾಕರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry