ಬುಧವಾರ, ಡಿಸೆಂಬರ್ 11, 2019
16 °C

ಅನಿಲ್‌, ವಿಜಯಶಂಕರ್ 5ರಂದು ಕಾಂಗ್ರೆಸ್‌ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಿಲ್‌, ವಿಜಯಶಂಕರ್ 5ರಂದು ಕಾಂಗ್ರೆಸ್‌ ಸೇರ್ಪಡೆ

ಎಚ್.ಡಿ.ಕೋಟೆ/ಮೈಸೂರು: ಎಚ್.ಡಿ.ಕೋಟೆ ವಿಧಾನಸಭಾಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅನಿಲ್ ಚಿಕ್ಕಮಾದು ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರು ಫೆ.5ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಟಿಕೆಟ್ ನೀಡುವ ಆಶ್ವಾಸನೆ ದೊರೆತಿದೆ. ಜೆಡಿಎಸ್ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲಾಗುವುದು ಎಂದು ಅನಿಲ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಸಂಸದ ಧ್ರುವನಾರಾಯಣ, ಮುಖಂಡ ಎಂ.ಸಿ.ದೊಡ್ಡನಾಯಕ, ಜೆಡಿಎಸ್‌ನ ಎಚ್.ಡಿ.ಕೋಟೆ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಡಿ.ಗೌಡ, ಸರಗೂರು ತಾಲ್ಲೂಕು ಅಧ್ಯಕ್ಷ ಪಿ.ರವಿ, ಯುವ ಘಟಕದ ಅಧ್ಯಕ್ಷ ಬೆಟ್ಟಸ್ವಾಮಿ ಸಿದ್ದರಾಮಯ್ಯ  ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ‘ಫೆ.5ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದೇನೆ ಎಂದು ವಿಜಯಶಂಕರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಪ್ರಮುಖರೊಂದಿಗೆ ಸೇರಲಿದ್ದೇನೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)