ನಾನೂ ಟಿಕೆಟ್‌ ಆಕಾಂಕ್ಷಿ: ಜಗದೀಶ

7

ನಾನೂ ಟಿಕೆಟ್‌ ಆಕಾಂಕ್ಷಿ: ಜಗದೀಶ

Published:
Updated:
ನಾನೂ ಟಿಕೆಟ್‌ ಆಕಾಂಕ್ಷಿ: ಜಗದೀಶ

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದೇನೆ. ಟಿಕೆಟ್ ಸಿಗದಿದ್ದರೂ ಪಕ್ಷ ಸಂಘಟನೆಗೆ ದುಡಿಯುತ್ತೇನೆ ಎಂದು ಬಿಜೆಪಿ ಮುಖಂಡ ಜಗದೀಶ ಗೌಡ ಹೇಳಿದರು.

‘ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು ಎಂಬುದನ್ನು ಶೀಘ್ರವೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಲಿದ್ದಾರೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ರಾಮನಗರದಲ್ಲಿ ಕಮಲ ಅರಳಿಸಲು ಶಕ್ತಿ ಮೀರಿ ಶ್ರಮಿಸುತ್ತೇವೆ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ರಾಮನಗರದಿಂದ ಈ ಹಿಂದೆ ಆಯ್ಕೆಯಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಕ್ಷೇತ್ರಕ್ಕೆ ಏನೂ ಕೊಡುಗೆ ನೀಡಿಲ್ಲ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ಬೇಕಾಗಿದೆ’ ಎಂದರು.

ಪ್ರಚಾರ ಕಾರ್ಯ: ‘ನಿಮ್ಮ ಊರು,ನಿಮ್ಮ ನಾಯಕ’ ಎಂಬ ಘೋಷಣಾ ವಾಕ್ಯದೊಂದಿಗೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಪ್ರತಿ ಹಳ್ಳಿಯಲ್ಲೂ ಯುವ ಸಮುದಾಯವನ್ನು ಬಿಜೆಪಿಯತ್ತ ಸಳೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. 500ಕ್ಕೂ ಹೆಚ್ಚು ಯುವಕರು ಬಿಜೆಪಿ ಸೇರುತ್ತಿದ್ದಾರೆ ಎಂದರು.

ಚುನಾವಣೆಯ ಹಿನ್ನೆಲೆಯಲ್ಲಿ ಮನೆಮನೆಗೆ ತೆರಳಿ ಮೋದಿ ಸರ್ಕಾರದ ಸಾಧನೆಗಳು, ಜನಪರ ಯೋಜನೆಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷರು ಚಾಲನೆ ನೀಡಿದ್ದಾರೆ ಎಂದರು.

ಭಾನುವಾರ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶಕ್ಕೆ ರಾಮನಗರದಿಂದ 15 ಬಸ್ ಹಾಗೂ ಬೈಕುಗಳಲ್ಲಿ ತೆರಳುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ರಾಮಾಂಜನಿ, ಗೋಪಾಲ್, ಚಂದ್ರಶೇಖರ ರೆಡ್ಡಿ, ರಾಮಯ್ಯ, ನಿರ್ಮಲಾ, ಚಂದ್ರಕಲಾ, ಜೆ.ಕೆ. ರಂಗಸ್ವಾಮಿ ಗೋಪಿ, ಸಿಂಗ್ರಯ್ಯ, ಎಲ್.ಎಂ.ಕೃಷ್ಣಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry